ಸುದ್ದಿಯ ಸ್ಥಳ: Bhadravati, Shivamogga, Karnataka
ಮಲೆನಾಡು ಟುಡೆ ಸುದ್ದಿ / ಭದ್ರಾವತಿ / ಪಂಪ್ಸೆಟ್ ಮೋಟಾರ್ಗಳ ಕಳವಿಗೆ ಸಂಬಂಧಿಸಿದಂತೆ ದಾಖಲಾಗಿದ್ದ 2 ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಭದ್ರಾವತಿ ಪೇಪರ್ ಟೌನ್ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿ, ಕಳವಾಗಿದ್ದ ಮೋಟಾರ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಚಂದ್ರ (40) ಬಂಧಿತ ಆರೋಪಿ. ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ರಬ್ಬರ್ ಕಾಡು ಸಮೀಪ ಪಂಪ್ಸೆಟ್ ಮೋಟಾರ್ಗಳು ಕಳವಾಗಿದ್ದವು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.
ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸ್ ಇನ್ಸ್ಪೆಕ್ಟರ್ ಶರಣಪ್ಪ ನೇತೃತ್ವದ ಪಿಎಸ್ಐ ಕುಮಾರ್ ಎನ್. ಹಾಗೂ ಸಿಎಚ್ಸಿ ನಾಗರಾಜ್ ಎಂ. ಅವರನ್ನೊಳಗೊಂಡ ತಂಡ ಆರೋಪಿಯನ್ನು ವಶಕ್ಕೆ ಪಡೆದಿದೆ.
ಆರೋಪಿಯಿಂದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳವಾಗಿದ್ದ ಒಟ್ಟು 30,000 ರೂ. ಮೌಲ್ಯದ 2 ಪಂಪ್ಸೆಟ್ ಮೋಟಾರ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
