ಶಿವಮೊಗ್ಗ : ಶಿವಮೊಗ್ಗದಲ್ಲಿ ನ.27ರಿಂದ ಮೂರು ದಿನಗಳ ಕಾಲ ಡಿವಿಎಸ್ ಹಬ್ಬ–2026 ಸಂಭ್ರಮ! ಸಚಿವ ಯುಟಿ ಖಾದರ್​​ರಿಂದ ಉದ್ಘಾಟನೆ

ಹಂಚಿಕೊಳ್ಳಿ
WhatsApp Facebook X Telegram
DVS Habba 2026 Three-Day Fest in Shivamogga from Nov 27
DVS Habba 2026 Three-Day Fest in Shivamogga from Nov 27

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ನಗರದ ಪ್ರತಿಷ್ಠಿತ ದೇಶೀಯ ವಿದ್ಯಾಶಾಲಾ ಸಮಿತಿ (ರಿ.) ವತಿಯಿಂದ ನವೆಂಬರ್ 27ರಿಂದ 29ರವರೆಗೆ ಮೂರು ದಿನಗಳ ಕಾಲ ಅದ್ದೂರಿಯಾಗಿ ಡಿವಿಎಸ್ ಹಬ್ಬ–2026 ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ರುದ್ರಪ್ಪ ಕೊಳಲೆ ಹೇಳಿದರು.

ಇಂದು ನಡೆದ ಸುದ್ದಿಗೋಷ್ಟಿಯಲ್ಲಿ  ಮೂರು ದಿನಗಳ ವೈವಿಧ್ಯಮಯ ಕಾರ್ಯಕ್ರಮಗಳ ಸಂಪೂರ್ಣ ವಿವರಗಳನ್ನು ಹಂಚಿಕೊಂಡ ಅವರು ಉತ್ಸವದ ಮೊದಲ ದಿನವಾದ ನವೆಂಬರ್ 27ರಂದು ಬೆಳಿಗ್ಗೆ 10 ಗಂಟೆಯಿಂದ ಹಲವು ಶೈಕ್ಷಣಿಕ ಚಟುವಟಿಕೆಗಳು ಹಾಗೂ ಕಾರ್ಯಾಗಾರಗಳು ಆರಂಭವಾಗಲಿವೆ. ಮಧ್ಯಾಹ್ನ 2.30ಕ್ಕೆ ಡಿವಿಎಸ್ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾ ಮತ್ತು ಸಾಂಸ್ಕೃತಿಕ ಸಮಾರಂಭಗಳು ನಡೆಯಲಿದ್ದು, ಸಂಜೆ 5.30ಕ್ಕೆ ವಾರ್ಷಿಕ ಮಹೋತ್ಸವದ ಉದ್ಘಾಟನಾ ಸಮಾರಂಭ ಜರುಗಲಿದೆ. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಡಿವಿಎಸ್ ಹಬ್ಬಕ್ಕೆ ಚಾಲನೆ ನೀಡಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ನಾಮಫಲಕ ಅನಾವರಣ ಮತ್ತು ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ ಎಂದರು. 

ಹಾಗೆಯೇ ಎರಡನೇ ದಿನವಾದ ನವೆಂಬರ್ 28ರಂದು ಬೆಳಿಗ್ಗೆ 10 ಗಂಟೆಯಿಂದ ವಿವಿಧ ಕಾಲೇಜುಗಳ ವಾರ್ಷಿಕೋತ್ಸವ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳು ನಡೆಯಲಿವೆ. ಮಧ್ಯಾಹ್ನ 2.30ಕ್ಕೆ ಪದವಿಪೂರ್ವ ಕಾಲೇಜು ಸೇರಿದಂತೆ ವಿವಿಧ ವಿಭಾಗಗಳ ವಾರ್ಷಿಕ ಸಮಾರಂಭಗಳು ಹಾಗೂ ಸಂಜೆ 5.30ಕ್ಕೆ ಕಾಲೇಜುಗಳ ವಿಶೇಷ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಾಹಿತಿಯನ್ನು ನೀಡಿದರು.

ಕೊನೆಯ ದಿನವಾದ ನವೆಂಬರ್ 29ರಂದು ಬೆಳಿಗ್ಗೆ 10 ಗಂಟೆಯಿಂದ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ನಡೆಯಲಿದ್ದು, ಮಧ್ಯಾಹ್ನ 2.30ಕ್ಕೆ ಪ್ರಾಥಮಿಕ ಶಾಲೆ ಹಾಗೂ ಸಂಗೀತ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮಗಳು ಜರುಗಲಿವೆ. ಸಂಜೆಯ ವೇಳೆ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಹಾಗೂ ಸಂಗೀತ ಕಾರ್ಯಕ್ರಮಗಳು ಪ್ರದರ್ಶನಗೊಳ್ಳಲಿವೆ. ಈ ಮೂರು ದಿನಗಳ ಸಂಭ್ರಮದಲ್ಲಿ ಆಡಳಿತ ಮಂಡಳಿ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಶಿಕ್ಷಣ ತಜ್ಞರು, ಹಳೆಯ ವಿದ್ಯಾರ್ಥಿಗಳು, ಪೋಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor