ಸುದ್ದಿಯ ಸ್ಥಳ: Thirthahalli, Shivamogga, Karnataka
17ನೇ ಮೈಲಿಕಲ್ಲು ನಿವಾಸಿ ಬೇಬಿ (65) ಮೃತಪಟ್ಟ ಮಹಿಳೆ ಎಂದು ತಿಳಿದುಬಂದಿದೆ.
ಎಂದಿನಂತೆ ಕೆಲಸ ಮುಗಿಸಿಕೊಂಡು ಬೇಬಿ ಅವರು ರಸ್ತೆ ಬದಿಯಲ್ಲಿ ನಡೆದುಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಅಪಘಾತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

