ಶಿವಮೊಗ್ಗ: 19 ಅಂಗನವಾಡಿ ಕಾರ್ಯಕರ್ತೆ ಹಾಗೂ 54 ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ಡಿಸೆಂಬರ್ 19 ಕೊನೆಯ ದಿನ!

ಹಂಚಿಕೊಳ್ಳಿ
WhatsApp Facebook X Telegram
Shivamogga Anganwadi Recruitment 2026
Shivamogga Anganwadi Recruitment 2026

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ/ ಶಿವಮೊಗ್ಗ: ಶಿವಮೊಗ್ಗ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗೌರವಧನ ಆಧಾರದ ಮೇಲೆ ಈ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ.

ಒಟ್ಟು 19 ಅಂಗನವಾಡಿ ಕಾರ್ಯಕರ್ತೆ ಮತ್ತು 54 ಸಹಾಯಕಿ ಹುದ್ದೆಗಳು ಖಾಲಿ ಇದ್ದು, 19 ರಿಂದ 35 ವರ್ಷದೊಳಗಿನ ಸ್ಥಳೀಯ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ಪಿಯುಸಿ ಹಾಗೂ ಸಹಾಯಕಿ ಹುದ್ದೆಗೆ ಕನಿಷ್ಠ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು.

ಶಿವಮೊಗ್ಗ ತಾಲೂಕಿನ ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಡಿಸೆಂಬರ್ 19ರೊಳಗೆ ವಿನೋಬನಗರದ ವೀರ ಸಾವರ್ಕರ್ ವಾಣಿಜ್ಯ ಸಂಕೀರ್ಣದಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಹೆಚ್ಚಿನ ವಿವರಗಳು ಹಾಗೂ ಮಾಹಿತಿಗಾಗಿ ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ 08182-295110 ಅನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor