ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ 18 ವರ್ಷ ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳು ಉದ್ಯೋಗ ಸೇತು (UDYOGHA SETU) ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವಂತೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಮನವಿ ಮಾಡಿದೆ. ಉದ್ಯೋಗ ಹುಡುಕುವವರನ್ನು ಉದ್ಯೋಗದಾತರೊಂದಿಗೆ ಒಂದೇ ಡಿಜಿಟಲ್ ವೇದಿಕೆಯಲ್ಲಿ ಸಂಪರ್ಕಿಸಲು ಕರ್ನಾಟಕ ಸರ್ಕಾರ ಈ ಪೋರ್ಟಲ್ ಅಭಿವೃದ್ಧಿಪಡಿಸಿದ್ದು, ಇದರ ಮೂಲಕ ಅಭ್ಯರ್ಥಿಗಳು ತಮ ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಪಡೆದುಕೊಳ್ಳಲು ಅವಕಾಶವಾಗಲಿದೆ.
- ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರು ಪೋರ್ಟಲ್‌ನಲ್ಲಿ ತಮ್ಮದೇ ಪ್ರೊಫೈಲ್ ರಚಿಸಿಕೊಂಡು ನೋಂದಾಯಿಸಬಹುದು.
- ವೈಯಕ್ತಿಕ ಹಾಗೂ ವೃತ್ತಿಪರ ಮಾಹಿತಿಯನ್ನು ನಂತರವೂ ನವೀಕರಿಸಲು ಅವಕಾಶವಿದೆ.
- ಪ್ರಸ್ತುತ ಮತ್ತು ಭವಿಷ್ಯದ ಉದ್ಯೋಗಾವಕಾಶಗಳಿಗಾಗಿ ಈ ಸೌಲಭ್ಯ ಬಳಸಿಕೊಳ್ಳುವಂತೆ ಇಲಾಖೆ ತಿಳಿಸಿದೆ.
ಉದ್ಯೋಗಕ್ಕಾಗಿ ವಿವಿಧ ಖಾಸಗಿ ಕಂಪನಿಗಳು ಮತ್ತು ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವನ್ನು ಕಡಿಮೆ ಮಾಡಿ, ಉದ್ಯೋಗಾವಕಾಶಗಳ ಮಾಹಿತಿಯನ್ನು ಅಭ್ಯರ್ಥಿಗಳಿಗೆ ಸುಲಭವಾಗಿ ತಲುಪಿಸಲು ಈ ವೇದಿಕೆ ನೆರವಾಗಲಿದೆ ಎಂದು ಇಲಾಖೆ ತಿಳಿಸಿದೆ.
ಜಿಲ್ಲೆಯ ಅರ್ಹ ಯುವಜನರು ಪೋರ್ಟಲ್ ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬೇಕು. ನೋಂದಣಿಯ ಹಂತಗಳನ್ನು ತಿಳಿಯಲು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ವಿವರಣಾತ್ಮಕ ಯೂಟ್ಯೂಬ್ ವಿಡಿಯೋ ವೀಕ್ಷಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

