ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಧಾರವಾಡದ ಆರ್. ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿವಮೊಗ್ಗದ ಎಂ. ಗಂಗಾಧರ ರಾವ್ ಪವಾರ್ ಅವರು ಹೈಜಂಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.
ಶಿವಮೊಗ್ಗದ ರಾಜೇಂದ್ರನಗರದ ಆರನೇ ತಿರುವಿನ ನಿವಾಸಿಯಾದ ಎಂ. ಗಂಗಾಧರ ರಾವ್ ಪವಾರ್ ಅವರು ಈ ಸಾಧನೆಯೊಂದಿಗೆ ಉತ್ತರ ಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
ಗಂಗಾಧರ ರಾವ್ ಪವಾರ್ ಅವರ ಸಾಧನೆಗೆ ಹಿರಿಯ ಕ್ರೀಡಾಪಟು ಎಸ್.ಸಿ. ಸತ್ಯನಾರಾಯಣ ಸೇರಿದಂತೆ ಹಲವರು ಅಭಿನಂದನೆ ಸಲ್ಲಿಸಿದ್ದಾರೆ ಎಂದು ಎಂ. ಗಂಗಾಧರ ರಾವ್ ಪವಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
