ಭದ್ರಾವತಿ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ: 93 ಕ್ವಿಂಟಾಲ್ ಅನ್ನಭಾಗ್ಯದ ಅಕ್ಕಿ, 85 ಕ್ವಿಂಟಾಲ್ ರಾಗಿ ಸೀಜ್

ಹಂಚಿಕೊಳ್ಳಿ
WhatsApp Facebook X Telegram
Bhadravati Police Seize 93 Quintals of Anna Bhagya Rice
Bhadravati Police Seize 93 Quintals of Anna Bhagya Rice

ಸುದ್ದಿಯ ಸ್ಥಳ: Bhadravati, Shivamogga, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 93 ಕ್ವಿಂಟಾಲ್ ಅನ್ನಭಾಗ್ಯ ಪಡಿತರ ಅಕ್ಕಿ ಮತ್ತು 85 ಕ್ವಿಂಟಾಲ್ ರಾಗಿಯನ್ನು ಭದ್ರಾವತಿ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ನವೆಂಬರ್ 26ರಂದು ಭದ್ರಾವತಿ ತಾಲ್ಲೂಕಿನ ವೀರಾಪುರ ಗ್ರಾಮದ ನಿವಾಸಿ ಹಬೀಬ್ ಖಾನ್ ಬಿನ್ ಬಾಸಿದ್ ಖಾನ್ ಎಂಬಾತ ರೇಷನ್​ನ್ನ ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ಪೊಲೀಸರಿಗೆ ಇನ್​ಫಾರ್ಮೇಶನ್​ ಬಂದಿತ್ತು. ಅಲ್ಲದೆ ಈ ಬಗ್ಗೆ ಭದ್ರಾವತಿ ಗ್ರಾಮಾಂತರ ವಿಭಾಗದ ಆಹಾರ ನಿರೀಕ್ಷಕರು ದೂರು ಸಹ ನೀಡಿದ್ದರು. ಪೂರಕವಾಗಿ ಕೇಸ್ ದಾಖಲಿಸಿರುವ ಪೊಲೀಸರು ದಾಳಿ ನಡೆಸಿ ಆರೋಪಿ ಹಬೀಬ್ ಖಾನ್‌ನನ್ನು ದಸ್ತಗಿರಿ ಮಾಡಿದೆ. ಅಲ್ಲದೆ ಅಕ್ರಮವಾಗಿ ಸಂಗ್ರಹಿಸಿದ್ದ 93 ಕ್ವಿಂಟಾಲ್ ಅಕ್ಕಿ ಹಾಗೂ 85 ಕ್ವಿಂಟಾಲ್ ರಾಗಿಯನ್ನು ವಶಕ್ಕೆ ಪಡೆದುಕೊಂಡಿದೆ.

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಶಿಲ್ಪಾ, ಪ್ರೊಬೇಷನರಿ ಪಿಎಸ್‌ಐ ಉದಯ್ ಕುಮಾರ್, ಹೆಚ್‌ಸಿ ಅರುಣ್ ಹಾಗೂ ಸಿಬ್ಬಂದಿಗಳಾದ ಸಂತೋಶ್, ರಾಮಕೃಷ್ಣ ಮತ್ತು ಹನುಮಂತ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor