ಮನೆಯಲ್ಲಿ ನೇಣುಬಿಗಿದುಕೊಂಡು ಖಾಸಗಿ ಆಸ್ಪತ್ರೆಯ ವೈದ್ಯ ಆತ್ಮ,ಹತ್ಯೆ

Malenadu Today

ಶಿವಮೊಗ್ಗ  : ನಗರ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕೆಲಸ ನಿರ್ವಹಿಸುತ್ತಿರುವ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಡಾ. ಲೋಲಿತ್ ಬಿ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವುದು. ಗೋಪಾಳದಲ್ಲಿರುವ ಅವರ ನಿವಾಸದಲ್ಲಿ ಲೋಲಿತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮದುವೆಯಾಗಿ ಒಂದು ವರ್ಷವಷ್ಟೆ ಆಗಿತ್ತು. ಅವರ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸ್ತಿದ್ದಾರೆ.  

 

Share This Article