ಚಾಲಕನ ಜೊತೆ ಮಕ್ಕಳನ್ನು ಕರೆದುಕೊಂಡು ಹೋದ ಮಹಿಳೆ/ ಪತ್ನಿ ಕೆಲಸಕ್ಕೆ ಕಣ್ಣೀರು ಹಾಕುತ್ತಿರುವ ಪತಿ

ಹಂಚಿಕೊಳ್ಳಿ
WhatsApp Facebook X Telegram

ಗಂಡನನ್ನು ಬಿಟ್ಟು ಚಾಲಕನ ಜೊತೆ ಗೃಹಿಣಿಯೊಬ್ಬರು ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನಲ್ಲಿ ನಡೆದಿದೆ. ಈ ಸಂಬಂಧ ಕಂಪ್ಲೇಂಟ್ ದಾಖಲಾಗಿದ್ದು, ಘಟನೆಯಿಂದ ನೊಂದು ಪತಿ ಕಣ್ಣೀರು ಹಾಕುತ್ತಿದ್ದಾರೆ. 

ವಿ.ಹೆಚ್.ಪಿ ಮುಖಂಡನಿಗೆ ಸೆಂಟ್ರಲ್ ಜೈಲಿನಿಂದ ಹಣಕ್ಕಾಗಿ ಬೆದರಿಕೆ ಕರೆ! ಹಣ ಕೇಳಲು ಬಂದು ಸಿಕ್ಕಿಬಿದ್ದ ಕಟ್ಟಪ್ಪ !  ರೌಡಿಗಳಿಗೆ ಜೈಲುಗಳೇ ಹಣ ಸುಲಿಗೆಗೆ ರಾಜಮಾರ್ಗವಾಗುತ್ತಿದೆಯಾ?  BREAKING NEWS

ಶಿಕಾರಿಪುರ ತಾಲೂಕಿನ ಪುಣೇದಹಳ್ಳೀ ಗ್ರಾಮದಲ್ಲಿ ಪರಶುರಾಮ್ ಮತ್ತು ಶಾರದಾ ದಂಪತಿ ವಾಸವಾಗಿದ್ದರು. ಕಳೆದ 13 ವರ್ಷದ ಹಿಂದೆ  ಮದುವೆಯಾಗಿದ್ದ ಇವರಿಗೆ ಇಬ್ಬರು ಮಕ್ಕಳಿದ್ರು. ಪತ್ನಿ ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ರು. ಈ ಮಧ್ಯೆ ಮಕ್ಕಳ ದಾಖಲಾತಿಗಳನ್ನು ತೆಗೆದುಕೊಂಡು ಶಾಲೆಗೆ ಹೋಗಿದ್ದ ಮಹಿಳೆ ಅಲ್ಲಿಂದ ಮಕ್ಕಳನ್ನು ಕರೆದುಕೊಂಡು ಹೋಗಿದ್ದಾರೆ. ಬಳಿಕ ಅವರ ಸುಳಿವು ಸಿಕ್ಕಿಲ್ಲ

ಸರ್ಕಾರಿ ಅಧಿಕಾರಿಗಳೇ ಹುಷಾರ್ |  ರಹಸ್ಯ ಕ್ಯಾರ್ಯಾಚರಣೆ ​ ಹೆಸರಿನಲ್ಲಿ ಹೆದರಿಸುವವರಿದ್ದಾರೆ? 

ಸದ್ಯ ಪತಿ ಮತ್ತು ಆತನ ಕುಟುಂಬಸ್ಥರು ಘಟನೆಯಿಂದ ಬೇಸತ್ತು ಕಣ್ಣೀರು ಹಾಕುತ್ತಿದ್ದಾರೆ. ಪತ್ನಿ ಬರದೇ ಇದ್ದರೂ ಪರವಾಗಿಲ್ಲ. ಮುದ್ದಾದ ಎರಡು ಗಂಡು ಮಕ್ಕಳಾದ್ರೂ ವಾಪಸ್ ಮನೆಗೆ ಬರಬೇಕು. ಅವರ ಭವಿಷ್ಯ ದೃಷ್ಟಿಯಿಂದ ಇಬ್ಬರು ಗಂಡು ಮಕ್ಕಳನ್ನು ಪತ್ತೆ ಮಾಡಿ ಕೊಡಿ ಅಂತಾ ಪತಿ ಪರಶುರಾಮ್ ಮತ್ತು ಅಜ್ಜಿ ಮಂಜಮ್ಮ ಕಣ್ನೀರು ಹಾಕಿದ್ದಾರೆ. 

ಇನ್ನೂ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಚಾಲಕ ಹನುಮಂತಪ್ಪ ಎಂಬವರ ಜೊತೆ ಮಹಿಳೆಯು ಹೋಗಿದ್ದಾರೆ ಎಂದು ದೂರು ದಾಖಲಿಸಲಾಗಿದ್ದು, ಈ ಸಂಬಂದ ಪೊಲೀಸರು ತನಿಖೆ ನಡೆಸ್ತಿದ್ದಾರೆ. 

 ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor