ಪ್ರಸ್ತುತ, ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಅಲ್ಲದೆ ಶೀತ ಗಾಳಿ ಹಾಗೂ ಅತಿ ಕಡಿಮೆ ತಾಪಮಾನವಿದೆ. ಈ ಪರಿಸ್ಥಿತಿಯು ಇನ್ನಷ್ಟು ದಿನ ಮುಂದುವರೆಯುವ ಸಾಧ್ಯತೆಯಿದೆ. ಮೇಲಾಗಿ ಮುಂದಿನ ವಾರದಲ್ಲಿ ಇನ್ನೊಂದು ಚಂಡಮಾರುತವು ಬಂಗಾಳಕೊಳ್ಳಿಗೆ ಅಪ್ಪಳಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದೆ. ಹಾಗಾಗಿ ಪ್ರತಿಕೂಲ ಹವಾಮಾನದಿಂದಾಗಿ, ಜನರ ಆರೋಗ್ಯದಲ್ಲಿ ವ್ಯತ್ಯಾಸಗಳು ಆಗುವ ಸಾಧ್ಯತೆ ಇದೆ. ಅಲ್ಲದೆ ವಿವಿಧ ಕಾಯಿಲೆಗಳು ಹರಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (Health and Family Welfare Department) ಎಚ್ಚರಿಕೆಯ ಸಲಹೆಗಳನ್ನು ಜಾರಿ ಮಾಡಿದೆ.
ಇದನ್ನು ಸಹ ಓದಿ : ಬಂಧನದಿಂದ ಬಚಾವ್ ಆದ ಭಗವಾನ್/ ಸಾಗರ ತಾಲ್ಲೂಕಿನಲ್ಲಿ ಏನಿದು ಕೇಸ್
ಥಂಡಿ ವಾತಾವರಣದಲ್ಲಿ ಸಾಮಾನ್ಯವಾಗಿ ಕಂಡುಬರುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆಯಿಂದ ಸಲಹಾ ಪತ್ರ ಜಾರಿ ಮಾಡಲಾಗಿದೆ. ಗರ್ಭಿಣಿ, ಬಾಣಂತಿ ಮಹಿಳೆಯರು, ವೃದ್ಧರು, ಶ್ವಾಸಕೋಶ ಸಮಸ್ಯೆ ಇರುವವರು ಹೆಚ್ಚಿನ ಜಾಗ್ರತೆ ವಹಿಸಬೇಕೆಂದು ಕೋರಲಾಗಿದೆ. ಚಳಗಾಲದ ದಿನಗಳಲ್ಲಿ ಸಾರ್ವಜನಿಕರು, ಮಕ್ಕಳು ( ನವಜಾತ ಶಿಶುಗಳು ಸೇರಿದಂತೆ),ಗರ್ಭಿಣಿಯರು, ವೃದ್ಧರು ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದೆ. ಮಾಡಬೇಕಾದ್ದು ಹಾಗೂ ಮಾಡಬಾರದಾದ ಕ್ರಮಗಳ ಪಟ್ಟಿ ಹೀಗಿದೆ ಓದಿ
ಇದನ್ನು ಸಹ ಓದಿ : ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಮುಖ್ಯಮಂತ್ರಿ ಚಂದ್ರುರವರ ಹೇಳಿಕೆ
1. ಮಾಡಬೇಕಾದ್ದು
ಯಾವಾಗಲೂ ಬೆಚ್ಚಗಿನ ನೀರು / ಸೂಪ್ಗಳನ್ನು ಕುಡಿಯುವುದು.
ಸುಲಭವಾಗಿ ಜೀರ್ಣವಾಗುವ ಹಾಗೂ ಆಗತಾನೆ ತಯಾರಿಸಿದ ಆಹಾರ ಪದಾರ್ಥಗಳನ್ನು ಯಾವಾಗಲೂ ಸ್ವೆಟ್ಟರ್, ಸಾಕ್ಸ್ ಹಾಗೂ ಕೈಗವಸುಗಳನ್ನು ಧರಿಸುವುದು, ಒಳಗಿರುವಾಗಲೂ ಬೆಚ್ಚಗಿರುವುದು ಉತ್ತಮ.
ಸ್ನಾನಕ್ಕೆ ಬಿಸಿ ನೀರು / ಬೆಚ್ಚಗಿನ ನೀರನ್ನು ಉಪಯೋಗಿಸುವುದು.
ಅನಗತ್ಯವಾಗಿ ಹೊರ ಸಂಚಾರವನ್ನು ತಪ್ಪಿಸಿ,
ಕಿವಿಗಳನ್ನು ಹತ್ತಿಯಿಂದ ಮುಚ್ಚಿಕೊಳ್ಳಿ ಅಥವಾ ಸ್ಕಾರ್ಫ್ ಕಟ್ಟಕೊಳ್ಳಿ ಹಾಗೂ ಹೋಗಲೇಬೇಕಾದಲ್ಲಿ ಮಾಸ್ಕ್ ಧರಿಸಬೇಕು.
ನೆಗಡಿ, ಕೆಮ್ಮು ಹಾಗೂ ಜ್ವರದ ಲಕ್ಷಣಗಳಿರುವವರಿಂದ ದೂರವಿರಬೇಕು.
ಮೊಣಕೈ ಒಳಗೆ ಸೀನುವುದು / ಕೆಮ್ಮುವುದು, ಅಥವಾ ಸೀನುವಾಗ / ಕೆಮ್ಮುವಾಗ ಟಿಶ್ಯು ಅಥವಾ ಕರವಸ್ತ್ರವನ್ನು ಬಳಸುವುದು.
ಕೈಗಳನ್ನು ಆಗಾಗ್ಗೆ ನೀರು ಹಾಗೂ ಸೋಪಿನಿಂದ ತೊಳೆಯುವುದು.
ಜ್ವರ / ಪ್ಲೂ ಲಕ್ಷಣಗಳು ಅಥವಾ ಇತರೆ ಯಾವುದಾದರೂ ಖಾಯಿಲೆಯ ಲಕ್ಷಣಗಳದ್ದಲ್ಲಿ ತಕ್ಷಣವೇ ವೈದ್ಯರ ಸಲಹೆಯನ್ನು ಪಡೆಯುವುದು. ಸ್ವಯಂವೈದ್ಯ ಪದ್ಧತಿಗಳನ್ನು ಅನುಸರಿಸಬಾರದು.
ಇದನ್ನು ಸಹ ಓದಿ : ಸಾಗರ ಪೇಟೆ ಸ್ಟೇಷನ್ನಲ್ಲಿ ನಡೀತು ಈ ವಿಶೇಷ ಕಾರ್ಯಕ್ರಮ
2. ಮಾಡಬಾರದ್ದು (Don’ts )
ತಣ್ಣಗಿನ ಪಾನೀಯಗಳು , ಐಸ್ ಕ್ರೀಂಗಳನ್ನು ಸೇವಿಸಬಾರದು.
ರೆಫ್ರಿಜರೇಟರ್ನ ಅಥವಾ ತಣ್ಣಗಿನ ನೀರನ್ನು ಕುಡಿಯಬಾರದು.
ಮಳೆಯಲ್ಲಿ ನೆನೆಯುವುದನ್ನು ಹಾಗೂ ತಣ್ಣನೆಯ ಶೀತ ಗಾಳಿಗೆ ಮೈ ಒಡ್ಡುವುದನ್ನು ತಪ್ಪಿಸಬೇಕು.
ಹೊರಾಂಗಣ ಪ್ರವಾಸಗಳನ್ನು ಆದಷ್ಟು ನಿರ್ಭಂಧಿಸಿ ( ವಿಶೇಷವಾಗಿ ಗಿರಿಧಾಮಗಳಿಗೆ ವಾರಾಂತ್ಯದ ಪ್ರವಾಸ ಹೋಗುವುದು . ಇತ್ಯಾದಿ).
ಮಸಾಲಾಯುಕ್ತ ಪದಾರ್ಥಗಳು / ಜಂಕ್ ಫುಡ್ಗಳನ್ನು ವರ್ಜಿಸಬೇಕು.
ಇದನ್ನು ಸಹ ಓದಿ :ಅಡಿಕೆ ದರ ಕ್ವಿಂಟಾಲ್ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ ನಿಂತ ಮೋದಿ ಸರ್ಕಾರ | ಕಾಂಗ್ರೆಸ್ ಆರೋಪವೇನು
ಇದನ್ನು ಸಹ ಕ್ಲಿಕ್ ಮಾಡಿ : ಜಿ20 ಸಭೆಗಾಗಿ ಬೆಂಗಳೂರಿನಲ್ಲಿ ಬೀಡುಬಿಟ್ಟ ಸಕ್ರೆಬೈಲ್ನ ಜೋಡಿ ಆನೆಗಳು | ಏನಿದು ವಿಶೇಷ ಗೊತ್ತಾ | Exclusive
ಮತ್ತಷ್ಟು ಸುದ್ದಿಗಳಿಗಾಗಿ ನಮ್ಮ ವಾಟ್ಸ್ಯಾಪ್ ಗ್ರೂಪ್ನ ಲಿಂಕ್ಗೆ ಕ್ಲಿಕ್ ಮಾಡಿ : Whatsapp link