ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿಯವರು ಈ ತಿಂಗಳ ಗ್ರಾಮ ವಾಸ್ತವ್ಯವನ್ನು ಶಿಕಾರಿಪುರ ತಾಲ್ಲೂಕಿನ ಮಳೂರಿನಲ್ಲಿ ಕೈಗೊಳ್ಳುವುದಾಗಿ ನಿಶ್ಚಯಿಸಿದ್ದಾರೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ, ಡಾ.ಆರ್ ಸೆಲ್ವಮಣಿ , ಡಿಸೆಂಬರ್ 17 ರಂದು ಶಿಕಾರಿಪುರ ತಾಲ್ಲೂಕಿನ ತಾಳಗುಂದ ಹೋಬಳಿಯ ಮಳೂರು ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಮಾರಿಕಾಂಬ ಸಮುದಾಯ ಭವನಕ್ಕೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡುವರು.
ಇದನ್ನು ಸಹ ಓದಿ : ಜೆಡಿಎಸ್ನಲ್ಲಿ ಸಿದ್ದರಾಮಯ್ಯ ಆಪರೇಷನ್/ ವೈಎಸ್ವಿ ದತ್ತ ಸದ್ಯದಲ್ಲಿಯೇ ಕಾಂಗ್ರೆಸ್ಗೆ
ಅಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸುವರು . ಹಾಗೆಯೇ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಗ್ರಾಮ ವಾಸ್ತವ್ಯ ಮಾಡುವರು. ಗ್ರಾಮದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ ಡಿಸೆಂಬರ್ 15 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ತಿಳಿಸಿದ್ದಾರೆ.
ಇದನ್ನು ಸಹ ಓದಿ :ತಾಯಿ ಮನೆಯಲ್ಲಿಯೇ ಚಿನ್ನ ಕದ್ದು ಸಿಕ್ಕಿಬಿದ್ದ ಮಗ
ಮತ್ತಷ್ಟು ಸುದ್ದಿಗಳಿಗಾಗಿ ನಮ್ಮ ವಾಟ್ಸ್ಯಾಪ್ ಗ್ರೂಪ್ನ ಲಿಂಕ್ಗೆ ಕ್ಲಿಕ್ ಮಾಡಿ : Whatsapp
