ಇನ್ಮುಂದೆ ಕೃಷಿ ಭೂಮಿ ಪರಿವರ್ತನೆ ತುಂಬಾನೇ ಸರಳ/ ಹೇಗೆ ಗೊತ್ತಾ

Malenadu Today

ಕೃಷಿಭೂಮಿಯಲ್ಲಿ ಸ್ವಂತಕ್ಕೆ ಮನೆ, ಕೃಷಿ ಪರಿಕರಗಳನ್ನು ಸಂಗ್ರಹಿ ಸಿಡಲು ಕಟ್ಟಡ, ತೋಟದ ಮನೆ ನಿರ್ಮಿಸಿ ಕೊಳ್ಳಲು ರೈತರು ಅರ್ಜಿ ಸಲ್ಲಿಸಿದ ಏಳು ದಿನಗಳ ಒಳಗೇ ಮಂಜೂರಾತಿ ಆದೇಶ ಹೊರಡಿಸಲು ಜಿಲ್ಲಾಧಿಕಾರಿಗೆ ಗಡುವು ವಿಧಿಸುವ ಉದ್ದೇಶದಿಂದ ಕರ್ನಾಟಕ ಭೂ ಕಂದಾಯ ತಿದ್ದುಪಡಿ ಮಸೂದೆ ಮಂಡಿಸಲಾಗಿದೆ.

 ಇದನ್ನು ಸಹ ಓದಿ : ಹರತಾಳು ಹಾಲಪ್ಪರವರು ಶರಾವತಿ ಸಂತ್ರಸ್ತರಿಗಾಗಿ ಧರ್ಮಸ್ಥಳದಲ್ಲಿ ನ್ಯಾಯ ಕೇಳಲು ಹೋಗಿದ್ದಕ್ಕೆ ಕಾಂತಾರ ಮಹಿಮೆ ಕಾರಣ

ಈ ಮಸೂದೆಯನ್ನು ಕಂದಾಯ ಸಚಿವ ಆರ್, ಅಶೋಕ್ ಮಂಗಳವಾರ ವಿಧಾನಸಭೆ ಯಲ್ಲಿ ಮಂಡಿಸಿದರು. ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಸೆಕ್ಷನ್ 95 ಮತ್ತು 96ನ್ನು ಮತ್ತಷ್ಟುತಿದ್ದುಪಡಿ ತರುವ ಉದ್ದೇಶವನ್ನು ಮಸೂದೆ ಹೊಂದಿದೆ. 

ಇದನ್ನು ಸಹ ಓದಿ : ದೇವರ ಮುಂದೆ ಅಜ್ಜಿ ಮರ್ಡರ್​/ ಕೇಳೋರೆ ಇಲ್ಲದ ಅನಾಥೆ ಸಾವಿಗೆ, ನ್ಯಾಯ ಕೊಡಿಸಿದ ಶಿವಮೊಗ್ಗ ಪೊಲೀಸ್​/ EXCLUSIVE JP REPORT

ಮಹಾ ಯೋಜನೆ (ಮಾಸ್ಟರ್ ಪ್ಲಾನ್) ಅಥವಾ ನಗರ ಯೋಜನಾ ಪ್ರಾಧಿಕಾರದ ಮಂಜೂರಾತಿ ಅನ್ವಯ ಕೃಷಿಭೂಮಿ ಅಥವಾ ಅದರ ಭಾಗವನ್ನು ಯಾವುದಾದರೂ ಇತರೇ  ಉದ್ದೇಶಕ್ಕೆ ಬಳಸಲು ಇಚ್ಚಿಸುವವರು ನಿಗದಿಪಡಿಸಿದ ದಂಡ ಪಾವತಿಸಿ ಪ್ರಮಾಣಪತ್ರ ಸಹಿತ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಬೇಕು.

ಇದನ್ನು ಸಹ ಓದಿ :ಕೇಸ್​ ವಾಪಸ್​ತೆಗೆದುಕೊಳ್ಳುವಂತೆ ಬೆದರಿಕೆ/ ತಡರಾತ್ರಿ ಮನೆ ಬಾಗಿಲಿಗೆ ಬಂದು ಕಾರಿಗೆ ಬೆಂಕಿ ಹಚ್ಚಿದ್ರು/ ರಕ್ಷಣೆಯಿಲ್ಲ ಎಂದು ಕಣ್ಣಿರಿಟ್ಟ ಸಂತ್ರಸ್ತೆ

ಹೀಗೆ ಸಲ್ಲಿಕೆಯಾದ ಅರ್ಜಿಗಳಿಗೆ ಏಳು ದಿನಗಳಲ್ಲಿ ಜಿಲ್ಲಾಧಿಕಾರಿ ಮಂಜೂರಾತಿ ಆದೇಶ ಹೊರಡಿಸಬೇಕು. 15. ದಿನ ಕಳೆದರೂ ಜಿಲ್ಲಾಧಿಕಾರಿ ಅರ್ಜಿಗಳ ವಿಲೇವಾರಿ ಮಾಡದಿದ್ದರೆ, ಕೃಷಿಯೇತರ ಭೂಮಿಯಾಗಿ ಪರಿವರ್ತನೆ ಆಗಿದೆ ಎಂದು ಪರಿಭಾವಿಸಿಕೊಳ್ಳಬಹುದು ಎಂದು ಪ್ರಸ್ತಾವಿತ ಮಸೂದೆಯಲ್ಲಿ ತಿಳಿಸಲಾಗಿದೆ. 

ನಮ್ಮ ಸೋಶಿಯಲ್​ ಮೀಡಿಯಾ :   ಟ್ವಿಟ್ಟರ್ : ಫೇಸ್​ಬಕ್  : ಇನ್​ಸ್ಟಾಗ್ರಾಮ್  : ಟೆಲಿಗ್ರಾಂ : ವಾಟ್ಸ್ಯಾಪ್​

 ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link

Share This Article