BREAKING NEWS / ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಕೆಲ ಮಕ್ಕಳ ಆರೋಗ್ಯ ದಲ್ಲಿ ಏರುಪೇರು/ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ/ BEO ಹೇಳಿದ್ದೇನು?

Malenadu Today

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ  ಕೋಟೆಕೊಪ್ಪ ಸರ್ಕಾರಿ ಶಾಲೆಯಲ್ಲಿ ಕೆಲ ಮಕ್ಕಳು ಅಸ್ವಸ್ಥಗೊಂಡಿದ್ಧಾರೆ. ನಿನ್ನೆ ಶಾಲೆಯಲ್ಲಿ ಬಿಸಿಯೂಟ ಮಾಡಿದ್ದ ಮಕ್ಕಳು ಸಂಜೆ ಮನೆಗೆ ಬಂದಿದ್ದಾರೆ. ಈ ಪೈಕಿ ಕೆಲವು ಮಕ್ಕಳಲ್ಲಿ ರಾತ್ರಿ ವಾಂತಿಯಾಗಿದೆ.  

ಇದನ್ನು ಸಹ ಓದಿ ಶಿವಮೊಗ್ಗ ಕೋಮುಗಲಭೆಯ ಹಿಂದಿರೋ ತಂಡದ ಹೆಡೆಮುರಿ ಕಟ್ಟಿದ ಎಸ್​ಪಿಮಿಥುನ್​ ಕುಮಾರ್! ಏನಿದು ಕೇಸ್​? JP ಸ್ಟೋರಿ

ಅವರನ್ನು ತಕ್ಷಣವೇ ಅವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಪ್ರಾಥಮಿಕ ಹಂತದಲ್ಲಿ ಸಿಕ್ಕಿರುವ ಮಾಹಿತಿ ಪ್ರಕಾರ, ಶುಕ್ರವಾರವೂ ಸಹ ಮಕ್ಕಳಲ್ಲಿ ವಾಂತಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ. 

ಶಿವಮೊಗ್ಗ ಜಿಲ್ಲಾ ಮತದಾರರ ಪಟ್ಟಿ ಬಿಡುಗಡೆ, ಯಾವ್ಯಾವ ಕ್ಷೇತ್ರದಲ್ಲಿ ಎಷ್ಟು ಮತದಾರರಿದ್ದಾರೆ. ಪೂರ್ತಿ ಪಟ್ಟಿ ಇಲ್ಲಿದೆ ಓದಿ

ಅಧಿಕಾರಿಗಳು ಹೇಳೋದೇನು? 

ಸಾಗರ ತಾಲ್ಲೂಕಿನ ಬಿಇಒ ಬಿಂಬಾರನ್ನು ಇದೇ ವಿಷಯವಾಗಿ ಮಲೆನಾಡು ಟುಡೇ ತಂಡ ಸಂಪರ್ಕಿಸಿದೆ. ನಡೆದ ಘಟನೆಯ ಸಂಬಂಧ ಮಾಹಿತಿಯನ್ನು ಕೇಳಿದಾಗ, ಬಿಇಒರವರು, ಒಟ್ಟು ಮೂರು ಮಕ್ಕಳು ಅಸ್ವಸ್ಥರಾಗಿರುವುದು ಕಂಡು ಬಂದಿದೆ. ಇದೇ ಕಾರಣಕ್ಕೆ ಅಸ್ವಸ್ಥರಾಗಿದ್ಧಾರೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ, ಈ ಸಂಬಂಧ ವಿಚಾರಣೆ ನಡೆಯುತ್ತಿದೆ ಎಂದಿದ್ದಾರೆ. 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

 

Share This Article