ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣ ಆಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಅಂತಿಮ ಘಟ್ಟ ತಲುಪಿದೆ. ಬಹುಶಃ ಇದೇ ಫೆಬ್ರವರಿ ತಿಂಗಳಿನಲ್ಲಿ ನಿಲ್ದಾಣ ಚಾಲನೆ ಕೂಡ ಪಡೆದುಕೊಳ್ಳುವ ಸಾದ್ಯತೆ ಇದೆ.
ಇದನ್ನು ಓದಿ : ಶಿವಮೊಗ್ಗದಲ್ಲಿ ಗಿಲ್ಲಕ್ಕೋ ಶಿವ…ಗಿಲ್ಲಕ್ಕೋ/ ಶಿವಣ್ಣನ ಟಗರು ಡ್ಯಾನ್ಸ್ಗೆ , ಬಿಂದಾಸ್ ಆಗಿ ಕುಣಿದ ಲೇಡಿಸ್ ಫ್ಯಾನ್ಸ್
ಈ ಬೆನ್ನಲ್ಲೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೆಸರಿಡುವ ವಿಚಾರ ಸಾಕಷ್ಟು ಮುನ್ನಲೆಗೆ ಬಂದಿದೆ. ಅದರಲ್ಲಿಯು ಮುಖ್ಯವಾಗಿ ಮಾಜಿ ಸಿಎಂ ದಿವಂಗತ ಎಸ್.ಬಂಗಾರಪ್ಪನವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಬೇಕು ಎಂಬ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಹಲವರು ಬೇಡಿಕೆ ಸಲ್ಲಿಸುತ್ತಿದ್ದಾರೆ.
ಚಾಕೋಲೆಟ್ ಎಂದು ತಿಳಿದು ಇಲಿ ಪಾಷಾಣ ತಿಂದ ಮಗು/ ಪೋಷಕರೇ ಎಚ್ಚರವಹಿಸಿ / ತೀರ್ಥಹಳ್ಳಿಯಲ್ಲಿ ಪುಟ್ಟ ಮಗು ಸಾವು
ಇದಕ್ಕೆ ಪೂರಕವಾಗಿ ನಿನ್ನೆ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಹೆಸರನ್ನು ಇಡಬೇಕು ಎಂದು ನಿಟ್ಟೂರು ಈಡಿಗ ಮಹಾಸಂಸ್ಥಾನ ಮಠದ ರೇಣುಕಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ. ಪ್ರೆಸ್ ಟ್ರಸ್ಟ್ನಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಗ್ಗಂಟಾಗಿ ಉಳಿದಿ ರುವ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಯನ್ನು ಈಡೇರಿಸುವುದಾಗಿ ಬಿಜೆಪಿ ಸರ್ಕಾರ ಭರವಸೆ ನೀಡಿದೆ. ಈ ಸಂಬಂಧ ಈಗಾಗಲೇ ಕೇಂದ್ರಕ್ಕೆ ವರದಿಯನ್ನು ನೀಡಿದೆ. ಆದಷ್ಟು ಬೇಗ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಿ ಕತ್ತಲ್ಲಿರುವ ಮುಳುಗಡೆ ಸಂತ್ರಸ್ತರ ಬದುಕಿಗೆ ಬೆಳಕಾಗಬೇಕು ಎಂದು ಮನವಿ ಮಾಡಿದರು.
BREAKING NEWS/ ಶಿವಮೊಗ್ಗದ ಭೂಪಾಳಂ ರವರ ಮನೆಯಲ್ಲಿ ಶಾರ್ಟ್ ಸರ್ಕಿಟ್-ಬೆಂಕಿ/ ಶರತ್ ಸಾವು, ಮಗು ಸ್ಥಿತಿ ಗಂಭೀರ
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com




