horihabba : ಶಿವಮೊಗ್ಗದಲ್ಲಿ ಹೋರಿ ಹಬ್ಬ ದುರಂತ: ಇಬ್ಬರು ದುರ್ಮರಣ

ಹಂಚಿಕೊಳ್ಳಿ
WhatsApp Facebook X Telegram

ಶಿವಮೊಗ್ಗ ಜಿಲ್ಲೆಯ ಹೋರಿ ಬೆದರಿಸುವ ಹಬ್ಬದಲ್ಲಿ  (hori habba) ಇಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಕೊನಗವಳ್ಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಇನ್ನೊಬ್ಬರು ಶಿಕಾರಿಪುರದ ತಾಲ್ಲೂಕಿನ ಮಳೂರಿನಲ್ಲಿ ಸಾವನ್ನಪ್ಪಿದ್ದಾರೆ. 

ಕೊನಗವಳ್ಳಿಯಲ್ಲಿ ನಡೆದ ಹೋರಿ ಹಬ್ಬದ ಸ್ಪರ್ಧೆಯಲ್ಲಿ ಆಲ್ಕೋಳ ನಿವಾಸಿ 32 ವರ್ಷದ ಲೋಕೇಶ್​ ಸಾವನ್ನಪ್ಪಿದ್ಧಾರೆ. ನಿನ್ನೆ ನಡೆದ ಸ್ಪರ್ಧೆಯಲ್ಲಿ ಗಾಯಗೊಂಡಿದ್ದ ಲೋಕೆಶ್ ಇವತ್ತು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 

ಇನ್ನೂ ಇತ್ತ ಶಿಕಾರಿಪುರದ ಮಳೂರಿನಲ್ಲಿ ರಂಗನಾಥ್ ಎಂಬವರು ಸಾವನ್ನಪ್ಪಿದ್ದಾರೆ.ಮಳೂರಿನಲ್ಲಿ ಸ್ಪರ್ಧೆಯನ್ನು ನೋಡಲು ಹೋಗಿದ್ದ ರಂಘನಾಥ್​ ಸಾವನ್ನಪ್ಪಿದ್ಧಾರೆ. ಇಬ್ಬರು ಸಹ ಹೋರಿ ತಿವಿತದಿಂದ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಇನ್ನೂ ರಂಗನಾಥ್​ ಎಗ್​ರೈಸ್​ ಅಂಗಡಿಯಿಟ್ಟುಕೊಂಡಿದ್ದರೆ, ಲೋಕೇಶ್​ ಆಟೊ ಓಡಿಸಿ ಜೀವನ ಸಾಗಿಸುತ್ತಿದ್ದರು. ಇಬ್ಬರ ಶವ ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯ ಶವಾಗಾರದಲ್ಲಿದ್ದು, ಕುಟುಂಬಸ್ಥರು ನ್ಯಾಯ ಪರಿಹಾರಕ್ಕಾಗಿ ಪ್ರತಿಭಟನೆ ನಡೆಸ್ತಿದ್ದಾರೆ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor