siddaramaiah :ಅಂಗನವಾಡಿ ಕಾರ್ಯಕರ್ತೆಯರ ಹೋರಾಟದಲ್ಲಿ ಪಾಲ್ಗೊಂಡಿದ್ದ ಶಿವಮೊಗ್ಗದ ನೀಲಮ್ಮ ಸಾವು/ ರಾಜ್ಯ ಸರ್ಕಾರವೇ ಹೊಣೆ ಎಂದ ಸಿದ್ದರಾಮಯ್ಯ

ಹಂಚಿಕೊಳ್ಳಿ
WhatsApp Facebook X Telegram

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸ್ತಿದ್ದಾರೆ. ಈ ನಡುವೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಿವಮೊಗ್ಗ ಜಿಲ್ಲೆ ಶಿಕಾರಿಪುರದವರು ಎನ್ನಲಾಗದ ನೀಲಮ್ಮ ಎಂಬವರು ಸಾವನ್ನಪ್ಪಿದ್ದಾರೆ. ಈ ವಿಷಯ ವಿಪಕ್ಷ ನಾಯಕ ಸಿದ್ದರಾಮಯ್ಯರವರ (Siddaramaiah ) ಟ್ವೀಟ್​ನಿಂದ ಗೊತ್ತಾಗಿದೆ. 

ರಾಜ್ಯಸರ್ಕಾರದ ಕ್ರಮವನ್ನು ವಿರೋಧಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಿವಮೊಗ್ಗ ಜಿಲ್ಲೆಯ ನೀಲಮ್ಮ ಅವರ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರದ ಹೊಣೆಗೇಡಿತನ ಕಾರಣ. ಮೃತರ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ. 

ಕಳೆದ ಮೂರು ದಿನಗಳಿಂದ ಚಳಿ, ಬಿಸಿಲು ಎನ್ನದೆ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ, ಕನಿಷ್ಠ ಪಕ್ಷ ಅವರ ಸಮಸ್ಯೆಯನ್ನು ಆಲಿಸುವ ಸೌಜನ್ಯವಾದರೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಬೇಡವೇ? ಎಂದು ಪ್ರಶ್ನಿಸಿರುವ ಅವರು,  ಮಾತುಕತೆ ಮೂಲಕ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿಸುವ ಪ್ರಯತ್ನವನ್ನೇ ಮಾಡದೆ, ಏಕಾಏಕಿ ಪ್ರತಿಭಟನಾನಿರತ ಮೇಲೆ ಬಲಪ್ರಯೋಗ ಮಾಡುವುದು, ಬಂಧಿಸುವುದು ರಾಜ್ಯ ಬಿಜೆಪಿ ಸರ್ಕಾರದ ದಾರ್ಷ್ಟ್ಯವನ್ನು ತೋರುತ್ತದೆ.ಎಂದು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ದೀಪ ಆರುವ ಮೊದಲು ದೀಪ ಜೋರಾಗಿ ಉರಿಯುತ್ತದೆಯಂತೆ, ಬಿಜೆಪಿ ಸರ್ಕಾರವೂ ಹಾಗೆ ಎಂದು ಟ್ವೀಟ್ ನಲ್ಲಿ ಎಂದಿದ್ಧಾರೆ. 

ಇನ್ನೂ ಮೂಲಗಳ ಪ್ರಕಾರ, ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ನೀಲಮ್ಮ ಎಂಬವರು, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು, ಅವರಿಗೆ ಅನಾರೋಗ್ಯವೂ ಭಾದಿಸುತ್ತಿತ್ತು. ಅದರ ನಡುವೆ ಪ್ರತಿಭಟನೆಯಲ್ಲಿಯು ಪಾಲ್ಗೊಂಡಿದ್ದರು. ಈ ನಡುವೆ ಅವರ ಸಾವು ಸಂಭವಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor