Sagara Marikambe : ಸಾಗರ ಮಾರಿಕಾಂಬೆ ಜಾತ್ರೆಗೆ ಇವತ್ತಿನಿಂದ ಧಾರ್ಮಿಕ ಪೂಜೆ ! ಪ್ರಕ್ರಿಯೆ, ಪದ್ದತಿ, ವಿಧಾನ ಏನು? ಪ್ರಸಿದ್ಧ ಉತ್ಸವದಲ್ಲಿ ಯಾವಾಗ ಏನೇನು ನಡೆಯಲಿದೆ? ವಿವರ ಇಲ್ಲಿದೆ

Malenadu Today

MALENADUTODAY.COM | SHIVAMOGGA NEWS | SAGARA TALUK 

Sagara Marikambe : ಪ್ರತಿ ಮೂರು ವರ್ಷಗಳಿಗೊಮ್ಮೆ ಸಾಗರ ದಲ್ಲಿ ನಡೆಯುವ ಇತಿಹಾಸ ಪ್ರಸಿದ್ಧ ಮಾರಿಕಾಂಬ ಜಾತ್ರೆ ಫೆಬ್ರವರಿ 7ರಿಂದ ಆರಂಭಗೊಳ್ಳಲಿದ್ದು, 9 ದಿನಗಳ ಕಾಲ ವೈವಿಧ್ಯ ಮಯ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ರಾಜ್ಯದ ಅತಿದೊಡ್ಡ ಜಾತ್ರಾ ಉತ್ಸವ  ಇದಾಗಿದ್ದು, ಇತಿಹಾಸ ಪ್ರಸಿದ್ಧ ಮಾರಿಕಾಂಬ ಜಾತ್ರೆಯನ್ನು ಅತ್ಯಂತ ವಿಜೃಂಭಣೆ ಯಿಂದ ಆಚರಿಸಲು ಮಾರಿಕಾಂಬಾ ದೇವಸ್ಥಾನಗಳ ವ್ಯವಸ್ಥಾಪಕ ಸಮಿತಿಯು ಸಕಲಸಿದ್ಧತೆ ನಡೆಸಿದೆ.

ಟ್ರಾಫಿಕ್​ ಫೈನ್​ ಕಟ್ಟಲು 50 ಪರ್ಸೆಂಟ್ ಡಿಸ್ಕೌಂಟ್! ಶಿವಮೊಗ್ಗ ಸಿಟಿಯಲ್ಲಿ ಎಲ್ಲೆಲ್ಲಿ ದಂಡ ಕಟ್ಟಲು ಇದೆ ಅವಕಾಶ! ವಿವರ ಇಲ್ಲಿದೆ

ಜಾತ್ರಾ ಸಂದರ್ಭದಲ್ಲಿ ದೇವಿಯ ಸನ್ನಿಧಿಯಲ್ಲಿ ವಿವಿಧ ಪೂಜಾ ವಿಧಿ ವಿಧಾನಗಳು ಜರುಗಲಿವೆ. ಫೆಬ್ರವರಿ 5ರಂದು ಬೆಳಗ್ಗೆ 10 ಕ್ಕೆ ದೇವಿಗೆ ಸೀರೆ ತರುವುದು, ಬಾಸಿಂಗ ತರುವುದು, ಜಡೆ ತರುವುದು, ಆಭರಣ ತರುವ ಕಾರ್ಯಕ್ರಮವನ್ನು ಬಾಗಿನ ತೆಗೆದು ಕೊಂಡು ಹೋಗುವ ಮೂಲಕ ನಡೆಸಲಾಗುತ್ತದೆ. ಫೆಬ್ರವರಿ 6 ರಂದು ರಾತ್ರಿ 10ರಿಂದ ಮರುದಿನ ಬೆಳಗಿನ ಜಾವ 5 ಗಂಟೆವರೆಗೂ ಚಿಕ್ಕಮ್ಮನನ್ನು ಹೊರಡಿಸುವ ಕಾರ್ಯಕ್ರಮ ನಡೆಯಲಿದೆ. 

shivamogga : 288 ಮನೆ ವಿತರಣೆ/ 700 ಹಕ್ಕುಪತ್ರ ಹಂಚಿಕೆ ! ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ವೇಳೆ ಶಿವಮೊಗ್ಗಕ್ಕೆ ದೊಡ್ಡ ಗಿಫ್ಟ್!

ಫೆಬ್ರವರಿ 7ರ ಬೆಳಗ್ಗೆ ಮಹಾಗಣಪತಿ ದೇವಸ್ಥಾನದಲ್ಲಿ ದೇವಿಯ ಮಾಗಲ್ಯ ಪೂಜೆ ಮಾಡಿಸಿ ತವರು ಮನೆ ದೇವಸ್ಥಾನಕ್ಕೆ ತರಲಾಗುತ್ತದೆ. ಫೆಬ್ರವರಿ 7 ರ ರಾತ್ರಿ 10ಕ್ಕೆ ಪೋತರಾಜನಿಂದ ಚಾಟಿ ಸೇವೆ ನಂತರ ಹೆಣ್ಣು ಒಪ್ಪಿಸುವ ಕಾರ್ಯಕ್ರಮ ನಡೆಯಲಿದೆ. ಫೆಬ್ರವರಿ 8ರ ಬೆಳಗ್ಗೆ ಮಾರಿಕಾಂಬ ದೇವಿಯ ಗಂಡನ ಮನೆ ದೇವಸ್ಥಾನದಲ್ಲಿ ಶ್ರೀ ದೇವಿಯ ಮೂರ್ತಿ ಕೂರಿಸಲಾಗುತ್ತದೆ. ಆನಂತರ ಫೆಬ್ರವರಿ15ರವರೆಗೂ ಸಾರ್ವಜನಿಕರ ದರ್ಶನಕ್ಕೆ ಸಕಲ ರೀತಿಯಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ. ಜಾತ್ರಾ ಸಮಿತಿಯು ಎಲ್ಲ ರೀತಿ ಪೂಜೆಗಳಿಗೆ ಅನುಕೂಲವಾಗುವಂತೆ ಕ್ರಮ ವಹಿಸಿದೆ.

ಫೆಬ್ರವರಿ 7ರಿಂದ 15ರ ವರೆಗೂ ಪ್ರತಿ ದಿನ ಬೆಳಗ್ಗೆ 8 ಗಂಟೆಯಿಂದ ಮಹಾಮಂಗಳಾರತಿ, ರಾತ್ರಿ 9.30ರವರೆಗೆ  ದೇವಿಗೆ ಪೂಜಾ ಕಾರ್ಯಕ್ರಮ, ಪ್ರಸಾದ ವಿನಿಯೋಗ ಇರುತ್ತದೆ.ಮಾರಿಕಾಂಬ ಕಲಾ ವೇದಿಕೆ ( ಗಂಡನ ಮನೆ ) ಯಲ್ಲಿ ಪ್ರತಿ ದಿನ ಸಂಜೆ 5.30 ರಿಂದ ವಿವಿಧ ಸಂಘಟನೆಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.

ಫೆಬ್ರವರಿ 15ರ ರಾತ್ರಿ 10.30ಕ್ಕೆ ಅಮ್ಮನವರಿಗೆ ಚಾಟಿಸೇವೆ, ಅಮ್ಮನವರಿಗೆ ನೈವೇದ್ಯ ಮಹಾಪ್ರಸಾದ ವಿನಿಯೋಗ, ನಂತರ ರಾತ್ರಿ 12ರಿಂದ ಬೆಳಗ್ಗೆ 5 ರವರೆಗೂ ಪ್ರಸಿದ್ಧ ಜಾನಪದ ಕಲಾತಂಡಗಳೊಂದಿಗೆ ರಾಜಬೀದಿ ಉತ್ಸವ ನಡೆಯಲಿದೆ. ಶ್ರೀ ಮಾರಿಕಾಂಬ ದೇವಿಯನ್ನು ವನಕ್ಕೆ ಬಿಟ್ಟುಬರುವ ಮೂಲಕ ಜಾತ್ರೆಯು  ಸಂಪನ್ನಗೊಳ್ಳಲಿದೆ.

*ಶಿವಮೊಗ್ಗ ಜಿಲ್ಲೆಗೆ ಮೋದಿಗಿಫ್ಟ್​! ಮೂರು ರೈಲ್ವೆನಿಲ್ದಾಣ​ಕ್ಕೆ Amrit Bharat Station Yojana ಜಾರಿ! ಏನಿದು ಯೋಜನೆ ಗೊತ್ತಾ?*

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

 

Share This Article