ಯುವತಿಗೆ ಕಿರುಕುಳ ಕೊಟ್ಟ ಆರೋಪಿಗೆ 10 ವರ್ಷ ಶಿಕ್ಷೆ! 40 ಸಾವಿರ ದಂಡ! ಶಿಕ್ಷಕರ ವಿರುದ್ಧ ದಾಖಲಾಯ್ತು ಫೋಕ್ಸೋ ಕೇಸ್​

MALENADUTODAY.COM | SHIVAMOGGA NEWS |

ಯುವತಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪವೊಂದು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಯೊಬ್ಬನಿಗೆ ಕೋರ್ಟ್​ 10 ವರ್ಷ ಶಿಕ್ಷೆ ವಿಧಿಸಿ 40 ಸಾವಿರ ರೂಪಾಯಿ ದಂಡ ಹಾಕಿದೆ. ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ  ಈ ತೀರ್ಪು ನೀಡಿದೆ

2019ನೇ ಸಾಲಿನಲ್ಲಿ 25 ವರ್ಷದ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ನೊಂದ ಯುವತಿಯ ತಂದೆ ದೂರು ನೀಡಿದ್ದರು. ಈ ದೂರಿನನ್ವಯ ಆಗುಂಬೆ ಪೊಲೀಸ್ ಠಾಣೆಯಲ್ಲಿ(agumbe police station) ಕೇಸ್​ ದಾಖಲಾಗಿತ್ತು. ಪ್ರಕರಣ ತನಿಖೆ ನಡೆಸಿದ್ದ ಅಂದಿನ ಸಿಪಿಐ ಗಣೇಶಪ್ಪ ಆರೋಪಿ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಿದ್ದರು. ಕೋರ್ಟ್​ನಲ್ಲಿ ಪ್ರಕರಣ ಕುರಿತು ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ  ಶಾಂತರಾಜ್ ವಾದಮಂಡಿಸಿದ್ರದರು. ಇದೀಗ ವಿಚಾರಣೆ ಮುಗಿದು  3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ

ಇದನ್ನು ಸಹ ಓದಿ : BIG EXCLUSIVE : Cafe Coffee Day : ಅವರ್ ಬಿಟ್, ಇವರ್ ಬಿಟ್​ ತೀರ್ಥಹಳ್ಳಿ ಎಲೆಕ್ಷನ್​ ಕಣಕ್ಕೆ ಬಂತು ಡಿಕೆ ಶಿವಕುಮಾರ್ ಅಳಿಯನ ಹೆಸರು

ಆರೋಪಿತನ ವಿರುದ್ಧ ಕಲಂ 376(ಎಲ್) ಐಪಿಸಿ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತನಾದ ತೀರ್ಥಹಳ್ಳಿ ತಾಲ್ಲೂಕಿನ  38 ವರ್ಷದ ಯುವಕನಿಗೆ 10 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 40,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಲಾಗಿದೆ. 

ಶಿಕ್ಷಕರ ವಿರುದ್ಧ ಫೋಕ್ಸೋ ಕೇಸ್​

ಇನ್ನೊಂದು ಪ್ರಕರಣದಲ್ಲಿ ಬಾಲಕಿಯೊಬ್ಬಳಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಫೋಕ್ಸೋ ಕೇಸ್ ದಾಖಲಾಗಿದೆ. ಶಿಕ್ಷಕ ಹಾಗೂ ಆ ಶಿಕ್ಷಕನ ಪರವಾಗಿದ್ದ ಆರೋಪದಡಿ ಸಹೋದ್ಯೋಗಿ ಮೇಲೆ ಫೋಕ್ಸೋ ಕೇಸ್ (pocso)​ ದಾಖಲಾಗಿದ್ದು, ಶಿವಮೊಗ್ಗ ಜಿಲ್ಲೆ ನಿರ್ದಿಷ್ಟ ಠಾಣೆಯೊಂದರಲ್ಲಿ ಪ್ರಕರಣ ಸಂಬಂಧ ವಿಚಾರಣೆ ನಡೆಯುತ್ತಿದೆ. ಈ ಸಂಬಂಧ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮುತುವರ್ಜಿ ವಹಿಸಿ ಸಂತ್ರಸ್ತೆಯ ರಕ್ಷಣೆಗೆ ಮುಂದಾಗಿದ್ದಾರೆ.

*ಶಿವಮೊಗ್ಗ ಜಿಲ್ಲೆಗೆ ಮೋದಿಗಿಫ್ಟ್​! ಮೂರು ರೈಲ್ವೆನಿಲ್ದಾಣ​ಕ್ಕೆ Amrit Bharat Station Yojana ಜಾರಿ! ಏನಿದು ಯೋಜನೆ ಗೊತ್ತಾ?*

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Leave a Comment