ವಾಹನ ಸವಾರರಿಗೆ ಸೂಚನೆ ಇವತ್ತು ಮತ್ತು ನಾಳೆ (ಫೆ.18 -19) ಶಿವಮೊಗ್ಗದ ಈ ಮಾರ್ಗಗಳಲ್ಲಿ ಸಂಚಾರ ಬದಲಾವಣೆ! ಕಾರಣ ಮತ್ತು ವಿವರ ಇಲ್ಲಿದೆ

Malenadu Today

MALENADUTODAY.COM | SHIVAMOGGA NEWS

ಶಿವಮೊಗ್ಗದ  ಹರಕೆರೆ ಗ್ರಾಮದ ಪ್ರಸಿದ್ಧ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮಿತ್ತ ದೊಡ್ಡ ಜಾತ್ರೆಯೇ ನಡೆಯಲಿದೆ.  ಇವತ್ತು ಅಂದರೆ, ಫೆ.18 ರ ಬೆಳಗಿನ ಜಾವ 4 ರಿಂದ 19 ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬಂದು ಹೋಗುವ ಕಾರಣ ಜಿಲ್ಲಾಧಿಕಾರಿಗಳು ಈ ಕೆಳಗಿನಂತೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.Malenadu Today

ಆನೆ ಸಾಕಲು ಸಹ ಸರ್ಕಾರಕ್ಕೆ ಬಡತನವೇ? ಸಂಖ್ಯೆ ಕಡಿಮೆ ಮಾಡುವ ನಿರ್ಧಾರದ ಹಿಂದಿನ ಕಾರಣವೇನು ಗೊತ್ತಾ? ಗಜಪಡೆಯಿಂದಲೂ ದುಡಿಮೆ ನಿರೀಕ್ಷಿಸಿತೆ ಇಲಾಖೆ! JP Exclusiv

ತೀರ್ಥಹಳ್ಳಿ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುವ ವಾಹನಗಳು ಗಜಾನನ ಗೇಟ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್‌ಹೆಚ್ ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರುವುದು.

ತೀರ್ಥಹಳ್ಳಿಯಿಂದ ಬರುವ ಎಲ್ಲಾ ವಾಹನಗಳು ಎನ್‌ ಹೆಚ್ ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್‌ ಕ್ರಾಸ್‌ ನಿಂದ ಗಜಾನನ ಗೇಟ್ ಮೂಲಕ ಬಂದು ಶಿವಮೊಗ್ಗ ಸೇರುವುದು.

ಮೇಲ್ಕಂಡ ಮಾರ್ಗಗಳಲ್ಲಿ ಬದಲಾವಣೆಗಳು ಪೊಲೀಸ್ ವಾಹನಗಳು ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ ಎಂದು ತಿಳಿಸಲಾಗಿದೆ. 

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Share This Article