MALENADUTODAY.COM | SHIVAMOGGA | #KANNADANEWSWEB
ಶಿವಮೊಗ್ಗದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ (Veterinary College, Shivamogga) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಗುತ್ತಿಗೆ ಆಧಾರಿತ ಹುದ್ದೆಗಳ ನೇಮಕಾತಿ ಸಂಬಂಧ ಮಾರ್ಚ್ 01 ರಂದು ಸಂದರ್ಶನ ನಡೆಯಲಿದೆ. ಪಶುವೈದ್ಯಕೀಯ ಸ್ತ್ರೀ ರೋಗ ಮತ್ತು ಪ್ರಸೂತಿ ಶಾಸ್ತ್ರ ಪಶುವೈದ್ಯಕೀಯ ರೋಗಶಾಸ್ತ್ರ, ಹಾಗೂ ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗತ್ತಿದೆ.
READ | ಕೋವಿಡ್ ಟೈಂನಲ್ಲಿ ರಜೆ ಕೇಳಿ ಹೋಗಿದ್ದ ಕಾನ್ಸ್ಟೇಬಲ್ ಕಾಣೆ! ಮಾಳೂರು ಪೊಲೀಸ್ ಸ್ಟೇಷನ್ನಲ್ಲಿ ದಾಖಲಾಯ್ತು ಕೇಸ್
READ |ನುಗ್ಗೆಕಾಯಿ ಕಿರಿಕ್, ಉಣುಗೋಲಿನಿಂದ ಹಲ್ಲೆ! ಕರೆಂಟ್ ಲೈನ್ ಕೇಳಲು ಬಂದವ ದೊಣ್ಣೆಯಿಂದ ಹಲ್ಲೆ! ಕ್ರೈಂ ನ್ಯೂಸ್
ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಆಯ್ಕೆಯಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.56,700/- ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000/- ವೇತನವಾಗಿ ಪಾವತಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಂದರ್ಶನವನ್ನು ಮಾರ್ಚ್ 01 ರ ಬೆಳಗ್ಗೆ 11 ಗಂಟೆಯಿಂದ ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ ಶಿವಮೊಗ್ಗ ಇಲ್ಲಿ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ 08182-200872 ಹಾಗೂ ವಿಶ್ವವಿದ್ಯಾಲಯದ ಜಾಲತಾಣ www.kvafsu.edu.in ನ್ನು ಸಂಪರ್ಕಿಸಬಹುದೆಂದು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ತಿಳಿಸಿದ್ದಾರೆ.