500 ರೂಪಾಯಿ ನೋಟಿನ ಕಂತೆ…ಕಂತೆ ಹಣ! ಬಿಜೆಪಿ ವಿರುದ್ಧ ಕಾಂಗ್ರೆಸ್​ ಪಾಲಿಗೆ ಅಸ್ತ್ರವಾದ ಲೋಕಾಯುಕ್ತ ರೇಡ್

MALENADUTODAY.COM  |SHIVAMOGGA| #KANNADANEWSWEB

ಮತದಾರರನ್ನು 500 ರೂಪಾಯಿ ಕೊಟ್ಟು ಕರೆದುಕೊಂಡು ಬರಬೇಕು ಎನ್ನುವ ಸಿದ್ದರಾಮಯ್ಯರ ವಿಡಿಯೋ ಹಿಡಿದು ಬಿಜೆಪಿ ಟೀಕೆಗೆ  ಮುಂದಾದ ಹೊತ್ತಿನಲ್ಲಿ 500 ರೂಪಾಯಿ ನೋಟಿನ ಕೋಟಿ ಕೋಟಿ ಕಂತೆಯ ಲೋಕಾಯುಕ್ತ ರೇಡ್​ ಇಡೀ ಪಕ್ಷವನ್ನು ಮುಜುಗರಕ್ಕೆ ಸಿಕ್ಕಿಸಿದೆ. ಮಾಡಾಳ್ ವಿರೂಪಾಕ್ಷಪ್ಪ ಹಾಗು ಅವರ ಮಗನ ಮೇಲಿನ ರೇಡ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಇವತ್ತು ಎಲ್ಲೆಡೆ ಪ್ರತಿಭಟನೆ ನಡೆಸಿದೆ. 

READ | ಫೋಟೋ ಕ್ಲಿಕ್ಕಿಸುವಾಗ ಇರಲಿ ಎಚ್ಚರ! ಬದುಕಿಗೆ ಕಂಟಕವಾಗಬಲ್ಲದು ಒಂದೇ ಒಂದು ಇಮೇಜ್​! ಸೈಬರ್​ ಕ್ರೈಂ ಅಲರ್ಟ್!

ಈ ಸಂಬಂಧ ಶಿವಮೊಗ್ಗದಲ್ಲಿಯು ಪ್ರತಿಭಟನೆಯು ನಡೆದಿದೆ. ಶಿವಮೊಗ್ಗದ ಗೋಪಿ ಸರ್ಕಲ್​ನಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ರು.  ಇದಕ್ಕೂ ಮೊದಲು ಶಿವಮೊಗ್ಗದ ಶಿವಪ್ಪನಾಯಕ ವೃತ್ತದಿಂದ ಗೋಪಿವೃತ್ತದ ವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಈ ವೇಳೆ  ಶಾಸಕ ಮಾಡಾಳು ವಿರೂಪಾಕ್ಷಪ್ಪ ಹಾಗೂ ಸಿಎಂ ಬೊಮ್ಮಾಯಿ ರಾಜೀನಾಮೆಗೆ ಒತ್ತಾಯಿಸಿದ್ರು. ಬಿಜೆಪಿ ಅಂದರೇ ಭಾರತೀಯ ಜನತಾ ಪಾರ್ಟಿಯಲ್ಲ, ಭ್ರಷ್ಟ ಜನತಾ ಪಾರ್ಟಿ ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ಇನ್ನೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಶಾಸಕ ಮಧುಬಂಗಾರಪ್ಪ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನಕುಮಾರ್, ಆರ್,ಪ್ರಸನ್ನಕುಮಾರ್ ಸರ್ಕಾರದ ವಿರುದ್ಧ ಹರಿಹಾಯ್ದರು

READ |BREAKING NEWS : ಶಿವಮೊಗ್ಗದಲ್ಲಿ ಮತ್ತಿಬ್ಬರ ಮೇಲೆ ಗೂಂಡಾ ಕಾಯ್ದೆ (gunda act) ಜಾರಿ! ವರ್ಷವಿಡಿ ಜೈಲು ಗ್ಯಾರಂಟಿ!

Leave a Comment