SHIVAMOGGA | MALENADUTODAY NEWS | Aug 20, 2024 ಮಲೆನಾಡು ಟುಡೆ
ಲೋಕಾಯುಕ್ತ ಇಲಾಖೆ ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಕರ್ನಾಟಕ ಲೋಕಾಯುಕ್ತ ಪೊಲೀಸ್ (Karnataka Lokayukta Police)ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಆಗಸ್ಟ್-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಯಾವಾಗ ಸಭೆ
ಆ. 23 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು ಕಚೇರಿ ಸಭಾಂಗಣ,

ಆ.27 ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ
ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ,
ಆ.28 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು
ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಹೊಸನಗರ ತಾಲೂಕು ಕಚೇರಿ ಸಭಾಂಗಣ,
ಆ.29 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣ,
ಆ-30 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣಗಳಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಲಿದೆ.
ಸಾರ್ವಜನಿಕರ ಕುಂದು ಕೊರತೆ
ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
———————–
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ಇನ್ನಷ್ಟು ಸುದ್ದಿಗಳು
-
ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ