SHIVAMOGGA | MALENADUTODAY NEWS | Aug 21, 2024 ಮಲೆನಾಡು ಟುಡೆ
ಶಿವಮೊಗ್ಗ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರ ಕ್ಷೇತ್ರ ಶಿಕಾರಿಪುರದ ಪುರಸಭೆ ಶಿಕಾರಿಪುರ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆ ನಡೆದಿದೆ.
ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶೈಲಾ ಯೋಗೀಶ್ ಅವರು ಹಾಗೂ ಉಪಾಧ್ಯಕ್ಷರಾಗಿ ರೂಪಾ ಮಂಜುನಾಥ್ ಅವರು ಆಯ್ಕೆಯಾಗಿದ್ದಾರೆ.
ಶಿಕಾರಿಪುರ ಪುರಸಭೆ ಈ ಬಾರಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎಂ ಎ ಮಹಿಳೆಗೆ ಮೀಸಲಾಗಿತ್ತು.
ಇವತ್ತು ಚುನಾವಣಾ ಅಧಿಕಾರಿ ಸಾಗರ ಉಪವಿಭಾಗಾಧಿಕಾರಿ ಡಾ.ಯತೀಶ್ ಆರ್ ಅವರ ಸಮ್ಮುಖದಲ್ಲಿ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಯಾಗಿದೆ.
ಶಿಕಾರಿಪುರ ಪುರಸಭೆ ಒಟ್ಟು 23 ಸದಸ್ಯರನ್ನ ಒಳಗೊಂಡಿದೆ. ಇನ್ನೂ ಗೆದ್ದ ಅಭ್ಯರ್ಥಿಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಬಿವೈ ರಾಘವೇಂದ್ರ ಶುಭಕೋರಿದ್ದಾರೆ.
ಇನ್ನಷ್ಟು ಸುದ್ದಿಗಳು
-
ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ