ಕೇಂದ್ರ ಚುನಾವಣಾ ಆಯೋಗ ದೆಹಲಿಯ ವಿಜ್ಞಾನ ಭವನದಲ್ಲಿ ಇವತ್ತು ಸುದ್ದಿಗೋಷ್ಟಿಯನ್ನು ನಡೆಸಿ, ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಹಾಗೂ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇನ್ನೂ ಚುನಾವಣೆಯು ಘೋಷಣೆಯಾದ ಬೆನ್ನಲ್ಲೆ, ಇವತ್ತೆ ನೀತಿ ಸಂಹಿತೆಯನ್ನು ಜಾರಿಯಾಗಿದೆ. ಈ ಕ್ಷಣದಿಂದಲೇ ಚುನಾವಣಾ ಆಯೋಗದ ಹೈಪವರ್ ಪಡೆದುಕೊಳ್ಳುತ್ತದೆ. ಸರ್ಕಾರ ತನ್ನ ದೈನಂದಿನ ಆಡಳಿತವನ್ನು ನೋಡಿಕೊಳ್ಳುವುದಕ್ಕೆ ಸೀಮಿತವಾಗಲಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬರುವವರೆಗೂ ಯಾವುದೇ ಘೋಷಣೆಗಳನ್ನು ಮಾಡುವಂತಿರುವುದಿಲ್ಲ. ಈ ನಿಟ್ಟಿನಲ್ಲಿ ನೀತಿ ಸಂಹಿತೆಯ ಜಾರಿಯಿಂದಾಗಿ ಏನೇನು ಮಾಡಬಹುದು ಏನೇನು ಮಾಡಲಾಗದು ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ಓದಿ
ನೀತಿ ಸಂಹಿತೆ ಜಾರಿಯಾದರೆ
- ಮುಖ್ಯವಾಗಿ ಶಾಸಕರು, ಸಚಿವರು, ನಿಗಮ ಮಂಡಳಿ ಅಧ್ಯಕ್ಷರು ಸದಸ್ಯರು ಸೇರಿದಂತೆ ಯಾವುದೇ ಸರ್ಕಾರಿ ಸಭೆ ನಡೆಸುವಂತಿಲ್ಲ. ಇಲಾಖೆ ಅಧಿಕಾರಿಗಳ ಸಭೆ ನಡೆಸುವಂತಿರುವುದಿಲ್ಲ.
- ಮತದಾರರಿಗೆ ಆಮಿಷವೊಡ್ಡುವಂತಹ ಯಾವುದೇ ವಸ್ತುಗಳನ್ನು ನೀಡುವಂತಿಲ್ಲ. ಸಭೆ ಸಮಾರಂಭವನ್ನು ಕೈಗೊಳ್ಳುವಾಗಲು ಪೂರ್ವಾನುಮತಿಯನ್ನು ಪಡೆದುಕೊಳ್ಳಬೇಕಾಗುತ್ತದೆ.
- ನಾಯಕರ ಪ್ರಚಾರ, ಅಭ್ಯರ್ಥಿಗಳ ಪ್ರಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ಲೆಕ್ಕ ನೀಡಬೇಕಾಗುತ್ತದೆ. ಅಭ್ಯರ್ಥಿಗಳು ಬಳಸುವ ವಾಹನಗಳಿಗೆ ಪಾಸ್ ಪಡೆದುಕೊಳ್ಳಬೇಕು.
- ಯಾವುದೇ ಶಂಕುಸ್ಥಾಪನೆ, ಉದ್ಘಾಟನೆ, ಯೋಜನೆ ಘೋಷಣೆ, ಇತ್ಯಾದಿಗಳು ಸೇರಿದಂತೆ ಸರ್ಕಾರಿ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ.
- ಎಲ್ಲೆಡೆ ಹಾಕಿರುವ ಸರ್ಕಾರಿ ಕಾರ್ಯಕ್ರಮ , ಯೋಜನೆ ಹಾಗೂ ಇತರೇ ಫ್ಲೆಕ್ಸ್ಗಳು ಬ್ಯಾನರ್ಗಳನ್ನು ತೆರವುಗೊಳಿಸಲಾಗುತ್ತದೆ.
- ಆಯಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯು ಚುನಾವಣಾ ಅಧಿಕಾರಿಯಾಗಿ ಚುನಾವಣೆಯನ್ನು ಸಸೂತ್ರವಾಗಿ ನಡೆಸುವ ಅಧಿಕಾರ ಹಾಗೂ ಜವಾಬ್ದಾರಿಯನ್ನು ಪಡೆದುಕೊಳ್ಳುತ್ತಾರೆ.
- ಚುನಾವಣಾ ಆಯೋಗದ ಮಾದರಿ ನೀತಿ ಸಂಹಿತೆಯಲ್ಲಿರುವ ನಿಯಮಗಳನ್ನು, ಅನ್ವಯ ಅಭ್ಯರ್ಥಿಗಳು , ಪಕ್ಷಗಳು , ನಾಯಕರು ಪಾಲನೆ ಮಾಡಬೇಕಾಗುತ್ತದೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com
MALENADUTODAY.COM/ SHIVAMOGGA / KARNATAKA WEB NEWS/
HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023, shivamogga,shivamogga accident,road ,shivamogga news,shivamogga,shivamogga airport,kannada news live,kannada news,shivamogga airport inauguration,shivamogga latest news,pm modi in shivamogga,latest kannada news,shivamogga mp,live news,shivamogga today news,shivamogga airport,kannada live news,karnataka latest news,kannada latest news,pm modi inaugurate shivamogga airport,shivamogga new airport,latest news,karnataka news,breaking news,shivamogga news today
