SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 21, 2024
ಆರಗ ಜ್ಞಾನೇಂದ್ರ ವಿರುದ್ಧ ತನಿಖೆಗೆ ಆಗ್ರಹ
ಪಿಎಸ್ಐ ಹಗರಣ ಸೇರಿದಂತೆ ಆರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದ ಅವಧಿಯಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರವರು ಒತ್ತಾಯಿಸಿದ್ದಾರೆ. ಈ ಸಂಬಂಧ ನಿನ್ನೆದಿನ ಬೆಂಗಳೂರುನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಅವರು ಪಿಎಸ್ಐ ಹಗರಣದ ತನಿಖೆ ವೇಳೆ ಜ್ಞಾನೇಂದ್ರ ಅವರನ್ನು ವಿಚಾರಣೆಗೆ ಒಳಪಡಿಸಿಲ್ಲ. ಹಗರಣದ ಪ್ರಮುಖ ಆರೋಪಿ ತೀರ್ಥಹಳ್ಳಿಗೆ ಬಂದು ಹೋಗಿದ್ದಾರೆ ಎನ್ನುವ ಮಾಹಿತಿ ಇದೆ. ಈ ಎಲ್ಲ ಅಂಶಗಳ ಕುರಿತು ಸೂಕ್ತ ತನಿಖೆ ನಡೆಸುವಂತೆ ಮುಖ್ಯಮಂತ್ರಿ, ಗೃಹ ಸಚಿವರನ್ನು ಭೇಟಿಯಾಗಿ ಮನವಿ ಮಾಡಲಾಗುವುದು ಅಂಥಾ ತಿಳಿಸಿದರು.
ನಾಗಮಂಗಲ ಗಲಾಟೆ ವರದಿ ಸಲ್ಲಿಕೆ
ನಾಗಮಂಗಲದಲ್ಲಿ ಗಣೇಶಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಾಟೆ ಸಂಬಂಧ ಬಿಜೆಪಿ ಸತ್ಯ ಶೋಧನಾ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರಿಗೆ ತನ್ನ ವರದಿ ನೀಡಿದೆ. ಈ ವೇಳೆ ಗಲಾಟೆ ಪೂರ್ವ ನಿಯೋಜಿತ ಕೃತ್ಯ ಎಂದು ತಿಳಿಸಿದೆ. ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ನೇತೃತ್ವದ ಸಮಿತಿ ಇತ್ತೀಚೆಗೆ ಗಲಭೆಪೀಡಿತ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ವರದಿ ಸಿದ್ಧಪಡಿಸಿದ್ದು, ಅದನ್ನು ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸಲ್ಲಿಸಿದೆ.
ವೈದ್ಯರನ್ನ ತರಾಟೆ ತೆಗೆದುಕೊಂಡ ಬೇಳೂರು
ನಿನ್ನೆ ದಿನ ಸಾಗರದಲ್ಲಿ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಯೊಬ್ಬರು ಅಸ್ವಸ್ಥಗೊಂಡಿದ್ದರು. ಅವರನ್ನ ಸಾಗರ ಎಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ವಿಳಂಬವಾಗಿದೆ. ಈ ವೇಳೆ ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ವಿಷಯ ತಿಳಿದು ಆಸ್ಪತ್ರೆಗೆ ಬಂದಿದ್ದಾರೆ. ಅಲ್ಲಿನ ಸಿಬ್ಬಂದಿಯನ್ನ ತರಾಟೆ ತೆಗೆದುಕೊಂಡ ಅವರು ವಿದ್ಯಾರ್ಥಿಗೆ ತಕ್ಷಣವೇ ಚಿಕಿತ್ಸೆ ಲಭಿಸುವಂತೆ ಮಾಡಿದರು.
naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ