SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 24, 2024
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ತನ್ನ ದೈನಂದಿನ ಪ್ರಕಟಣೆಯಲ್ಲಿ ವಿವರಿಸಿದೆ.
ಇವತ್ತು ಅಂದರೆ, 24 ನೇ ಸೆಪ್ಟೆಂಬರ್ 2024 ರಂದು ಉತ್ತರ ಕನ್ನಡ ಜಿಲ್ಲೆಯ ಕೆಲವು ಕಡೆ ಭಾರಿಯಿಂದ ಅತಿಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಮತ್ತು ನಿರಂತರ ಗಾಳಿಯ ವೇಗ (40-50 kmph) ಇರಲಿದೆ ಎಂದು ತಿಳಿಸಿದೆ.
ರಾಯಚೂರು, ವಿಜಯಪುರ, ಧಾರವಾಡ, ಗದಗ್, ಹಾವೇರಿ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರಿ ಮಳೆ ಸಂಭವಿಸುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆ ಮತ್ತು ನಿರಂತರ ಗಾಳಿಯ ವೇಗ (40-50 kmph) ಸಂಭವಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನೂ ನಾಳೆ ಅಂದರೆ 25 ನೇ ಸೆಪ್ಟೆಂಬರ್ 2024 ರಂದು ಉತ್ತರ ಕನ್ನಡ, ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗಲಿದೆ ಎನ್ನಲಾಗಿದ್ದು ನಾಡಿದ್ದು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸೂಚನೆ ಇದೆ.