ಇಂಡಸ್ಟ್ರಿಯಲ್ ರೋಬೊಟಿಕ್ಸ್ & ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ವೃತ್ತಿಗಳಿಗೆ ಅರ್ಜಿ ಆಹ್ವಾನ! ಎಸ್​ಎಸ್​ಎಲ್​ಸಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು!

KARNATAKA NEWS/ ONLINE / Malenadu today/ May 29, 2023 SHIVAMOGGA NEWS

ಸಾಗರ /  ಶಿವಮೊಗ್ಗ ಜಿಲ್ಲೆ ಕಾರ್ಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ಆಗಸ್ಟ್-2023 ನೇ ಸಾಲಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಎಲೆಕ್ಟ್ರೀಷಿಯನ್, ಫಿಟ್ಟರ್, ಎಂ.ಈ.ವಿ., ಸಿ.ಎನ್.ಸಿ. ಇಂಡಸ್ಟ್ರಿಯಲ್ ರೋಬೊಟಿಕ್ಸ್ & ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ವೃತ್ತಿಗಳಲ್ಲಿ ಲಭ್ಯವಿರುವ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಸಂಸ್ಥೆಯ ವೆಬ್‍ಸೈಟ್ www.cite.karnataka.gov.in  ಮೂಲಕ ಹಾಗೂ ನೇರವಾಗಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕಾರ್ಗಲ್, ಸಾಗರ (ತಾ), ಇಲ್ಲಿ ಜೂನ್ 07 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಕಾರ್ಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಗಾಗಿ ಮೊ.ಸಂ.: 9880605897/ 8073009242/ 7899017818 ಗಳನ್ನು ಸಂಪರ್ಕಿಸುವುದು. 

Leave a Comment