KARNATAKA NEWS/ ONLINE / Malenadu today/ May 29, 2023 SHIVAMOGGA NEWS
ಕುವೆಂಪು ವಿಶ್ವವಿದ್ಯಾಲಯದ 33ನೇ ಘಟಿಕೋತ್ಸವ
ಶಿವಮೊಗ್ಗ: ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 33ನೇ ವಾರ್ಷಿಕ ಘಟಿಕೋತ್ಸವ ಜೂನ್-2023 ಮಾಹೆಯಲ್ಲಿ ಜರುಗಲಿದೆ.
ಸೆಪ್ಟೆಂಬರ್/ಅಕ್ಟೋಬರ್-2022 ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ವಿವಿಧ ರೆಗ್ಯೂಲರ್‍ನ ಸ್ನಾತಕ/ಸ್ನಾತಕೋತ್ತರ ಪದವಿ ಡಿಪ್ಲೋಮೊ ಮತ್ತು ಅಕ್ಟೋಬರ್-2022/ಮಾರ್ಚ್-2023 ರ ಬಿ.ಇಡಿ ಪದವಿ/ ಏಪ್ರಿಲ್-2022 ರ ರಿಪಿಟರ್ಸ್ ಪದವಿದರರು ಹಾಗೂ ದೂರಶಿಕ್ಷಣದ ಮೂಲಕ ನವೆಂಬರ್-2022 ರಲ್ಲಿ ನಡೆದ ಅಂತಿಮ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಹಾಗೂ ಪಿಹೆಚ್.ಡಿ ಪದವಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಘಟಿಕೋತ್ಸವದಲ್ಲಿ (kuvempu university convocation) ಪದವಿ ಪ್ರಮಾಣ ಪತ್ರ ಪ್ರಧಾನ ಮಾಡಲಾಗುವುದು.
ಅರ್ಜಿಯನ್ನು ನೇರವಾಗಿ ವಿಶ್ವವಿದ್ಯಾಲಯದ ವೆಬ್‍ಸೈಟ್ www.kuvempu.ac.in ಮೂಲಕ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ನಿಗದಿತ ಅರ್ಜಿ ಶುಲ್ಕ ಮತ್ತು ಇತರೆ ಮಾಹಿತಿಗಳನ್ನು ವಿಶ್ವವಿದ್ಯಾಲಯದ ವೆಬ್‍ಸೈಟ್ www.kuvempu.ac.inನಲ್ಲಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ.
ಸ್ನಾತಕ ಪದವಿ (ರೆಗ್ಯೂಲರ್)-7022254997, ಸ್ನಾತಕೋತ್ತರ ಪದವಿ/ವೃತ್ತಿಪರ ಕೋರ್ಸ್ (ರೆಗ್ಯೂಲರ್)-7022254993, ದೂರಶಿಕ್ಷಣ-7022255891, ತಾಂತ್ರಿಕ ಸಹಾಯಕ್ಕಾಗಿ 7022255745/ 8183098136 /8183098138 ಅಥವಾ ಈ ಮೇಲ್ ವಿಳಾಸ kusconvo@gmail.com ಮೂಲಕ ಸಂಪರ್ಕಿಸುವಂತೆ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮೇ 31 ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ನಗರ ಉಪವಿಭಾಗ-1ರ 11 ಕೆವಿ ಮಾರ್ಗದ ಯು.ಜಿ.ಕೇಬಲ್ ಅಳವಡಿಕೆ ಕೆಲಸ ಮೆಸ್ಕಾಂ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮೇ 31 ರಂದು ಶಿವಮೊಗ್ಗ ನಗರದ ಪ್ರಮುಖ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ?
ಸವಳಂಗ ರಸ್ತೆ, ಬಸವೇಶ್ವರ ನಗರ 1 ರಿಂದ 4ನೇ ಕ್ರಾಸ್, ಬಸವೇಶ್ವರ ನಗರ ಶಿವಾಲಯದ ಹತ್ತಿರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲ್ಲಿ ಮೇ 31 ರ ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಶಿವಮೊಗ್ಗದಲ್ಲಿಯೇ ನಡೆಯಲಿದೆ ಉದ್ಯೋಗ ಮೇಳ
ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ-31 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-255293, 9380663606 ಮತ್ತು 9482023412, 9535312531 ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅರ್ಜಿ ಆಹ್ವಾನ
ಸಾಗರ / ಶಿವಮೊಗ್ಗ ಜಿಲ್ಲೆ ಕಾರ್ಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ಆಗಸ್ಟ್-2023 ನೇ ಸಾಲಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಎಲೆಕ್ಟ್ರೀಷಿಯನ್, ಫಿಟ್ಟರ್, ಎಂ.ಈ.ವಿ., ಸಿ.ಎನ್.ಸಿ. ಇಂಡಸ್ಟ್ರಿಯಲ್ ರೋಬೊಟಿಕ್ಸ್ & ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ವೃತ್ತಿಗಳಲ್ಲಿ ಲಭ್ಯವಿರುವ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಸಂಸ್ಥೆಯ ವೆಬ್‍ಸೈಟ್ www.cite.karnataka.gov.in ಮೂಲಕ ಹಾಗೂ ನೇರವಾಗಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕಾರ್ಗಲ್, ಸಾಗರ (ತಾ), ಇಲ್ಲಿ ಜೂನ್ 07 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಕಾರ್ಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಗಾಗಿ ಮೊ.ಸಂ.: 9880605897/ 8073009242/ 7899017818 ಗಳನ್ನು ಸಂಪರ್ಕಿಸುವುದು.
