SHIVAMOGGA | MALENADUTODAY NEWS | ಮಲೆನಾಡು ಟುಡೆ Oct 15, 2024
ಶಿವಮೊಗ್ಗ | ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತ ಇಲಾಖೆ ವತಿಯಿಂದ ಕರ್ನಾಟಕ ಸಂಭ್ರಮ – 50 ರಡಿ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಅಭಿಯಾನದ ಕನ್ನಡಜ್ಯೋತಿ ರಥವು ಇವತ್ತು ಶಿವಮೊಗ್ಗ ನಗರದ ಶಿವಪ್ಪನಾಯಕ ವೃತ್ತಕ್ಕೆ ಆಗಮಿಸಿದೆ.
ಕನ್ನಡಜ್ಯೋತಿ ರಥಯಾತ್ರೆ ಶಿವಪ್ಪ ನಾಯಕ ವೃತ್ತದಿಂದ ಗೋಪಿವೃತ್ತ ಮಾರ್ಗವಾಗಿ ಮಹಾವೀರ ವೃತ್ತ ಕುವೆಂಪು ರಂಗಮಂದಿರದವರೆಗೆ ಸಾಗಿ ಬಂದಿತು. ಈ ವೇಳೆ ಮಹಿಳಾ ಮತ್ತು ಪುರುಷ ಡೊಳ್ಳು ತಂಡ ಹಾಗೂ ಇತರ ಕಲಾಮೇಳದೊಂದಿಗೆ ಮೆರವಣಿಗೆ ನಡೆಸಲಾಯಿತು.
ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರಡ್ಡಿ, ತಹಶೀಲ್ದಾರ್ ಗಿರೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹೆಚ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಡಿ ಮಂಜುನಾಥ್, ರೋಟರಿ ಸಂಸ್ಥೆಯ ವಿಜಯಕುಮಾರ್, ವಿವಿಧ ಕನ್ನಡಪರ ಸಂಘಟನೆ ಪದಾಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
ಇನ್ನೂ ಕನ್ನಡಜ್ಯೋತಿಯನ್ನ ಸ್ವಾಗತಿಸಿ ಮಾತನಾಡಿದ ಶಾಸಕ ಎಸ್.ಎನ್. ಚನ್ನಬಸಪ್ಪ ಕನ್ನಡ ಭಾಷೆ ಉಳಿದರೆ ಕನ್ನಡಿಗರು ಉಳಿಯಲು ಸಾಧ್ಯ. ಕನ್ನಡದ ಉಳಿವಿಗಾಗಿ ಹೋರಾಡಿದ ಹೋರಾಟಗಾರರನ್ನು ಸ್ಮರಿಸಬೇಕು. ಕನ್ನಡ ಭಾಷೆಯ ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಹೋರಾಟಗಳು ನಡೆಯುತ್ತಾ ಬಂದಿವೆ. ನಾವೆಲ್ಲರು ಕನ್ನಡ ಪರವಾದ ಹೋರಾಟಗಳನ್ನು ಸ್ಮರಿಸಬೇಕು ಎಂದರು.
SUMMARY | The Kannada Jyothi Ratha, organized by the District Administration, Zilla Panchayat, Kannada and Sanskrit Department under the ‘Karnataka Sambhrama-50’, has arrived at Shivappa Nayaka Circle in Shivamogga city today
KEYWORDS | Kannada Jyothi Ratha, District Administration, Zilla Panchayat, Kannada and Sanskrit Department, Karnataka Sambhrama-50, Shivappa Nayaka Circle, Shivamogga city today