ನಾಳೆ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಸುತ್ತಮುತ್ತ ಕರೆಂಟ್ ಕಟ್! ಭದ್ರಾವತಿಯಲ್ಲಿ ತಾಲ್ಲೂಕಿನ ಈ ಪ್ರದೇಶಗಳಲ್ಲಿ 4 ದಿನ ಪವರ್ ಕಟ್! ಎಲ್ಲೆಲ್ಲಿ? ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Jun 3, 2023 SHIVAMOGGA NEWS

ಭದ್ರಾವತಿ /power cut in shimoga today/  ತಾಲ್ಲೂಕಿನಲ್ಲಿ ಒಟ್ಟು ನಾಲ್ಕು ದಿನಗಳ ಕಾಲ ನಿರ್ದಿಷ್ಟ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

ಎಲ್ಲೆಲ್ಲಿ ಪವರ್ ಕಟ್ (Power cut today)

power cut timings / ಮೆಸ್ಕಾಂ ನಗರ ಉಪವಿಭಾಗದ ಘಟಕ-4 ರಲ್ಲಿ ತುರ್ತುಕಾರ್ಯ ಹಮ್ಮಿಕೊಂಡಿರುವುದರಿಂದ ಹೊಸಮನೆ, ವಿಜಯನಗರ, ಶಿವಾಜಿವೃತ್ತ, ತ್ಯಾಗರಾಜ ಬಡಾವಣೆ, ಹನುಮಂತನಗರ, ಕಬಳಿಕಟ್ಟೆ, ಅಶ್ವಥನಗರ ಬಡಾವಣೆಗಳಲ್ಲಿ ಜೂನ್​ 3, 5,6, 7ರಂದು ಬೆಳಗ್ಗೆ 10.30 ರಿಂದ ಸಂಜೆ 6ರ ವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ನಗರ ಉಪವಿಭಾಗದ ಎಇಇ ಪ್ರಕಟಣೆ ತಿಳಿಸಿದೆ.

ನಾಳೆ ವಿದ್ಯುತ್ ವ್ಯತ್ಯಯ

ಮಾಚೇನಹಳ್ಳಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ಜೂ.4 ರಂದು ಬೆಳಗ್ಗೆ 9 ರಿಂದ ಸಂಜೆ 6 ರ ವರೆಗೆ  ಈ ಕೆಳಕಂಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 

ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಜೇಡಿಕಟ್ಟೆ, ಹಳೇಜೇಡಿಕಟ್ಟೆ, ಡೈರಿ ಸರ್ಕಲ್, ಮಲವಗೊಪ್ಪ ನಿದಿಗೆ ಕೈಗಾರಿಕಾ ಪ್ರದೇಶ, ಹೊನ್ನವಿಲೆ, ಮಜ್ಜಿಗೇನಹಳ್ಳಿ, ಕಲ್ಲಹಳ್ಳಿ ಗ್ರಾ.ಪಂ.ವ್ಯಾಪ್ತಿ, ಶಿವರಾಮನಗರ, ವಿಶ್ವೇಶ್ವರಯ್ಯ ನಗರ, ಜೇಡಿಕಟ್ಟೆ ಹೊಸೂರು, ಜಯಂತಿ ಗ್ರಾಮ, ವೀರಾಪುರ, ಹುಲಿರಾಯನಕೊಪ್ಪ, ಹಾಗಲಮನೆ,ಸಂಕ್ಲೀಪುರ, ಸಿರಿಯೂರು, ವೀರಾಪುರ, ಮತ್ತಿಘಟ್ಟ, ಹಾತಿಕಟ್ಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಎಇಇ ತಿಳಿಸಿದ್ದಾರೆ.

 

Leave a Comment