KARNATAKA NEWS/ ONLINE / Malenadu today/ Jun 8, 2023 SHIVAMOGGA NEWS
ಸಾಗರ/ ತಾಲ್ಲೂಕಿನ ಕಾನ್ಲೆ ಕ್ರಾಸ್ ಬಳಿಯಲ್ಲಿ ಎರಡು ಬೈಕ್ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದಾರೆ.
ಯಾರು ಸೂಡಾ ಅಧ್ಯಕ್ಷರು? ಯಾರು ಮುಂದಿನ ಕಾಂಗ್ರೆಸ್ ಜಿಲ್ಲಾಧ್ಯಕ್ಷರು? ಶಿವಮೊಗ್ಗದ ಪ್ರಮುಖ ಹುದ್ದೆಗಾಗಿ ಬೆಂಗಳೂರಿನಲ್ಲಿಯೇ ಜೋರು ಪೈಪೋಟಿ! ಟಿಕೆಟ್ ತಂತ್ರಗಾರಿಕೆ ಮತ್ತೆ ಗೆಲ್ಲುತ್ತಾ?
ಹೇಗಾಯ್ತು ಘಟನೆ
ತಾಳಗುಪ್ಪ-ಸಾಗರ ರಸ್ತೆ ನಡುವಲ್ಲಿ ನಿನ್ನೆ ಸಂಜೆ 06:50 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಎರಡು ಬೈಕ್ಗಳು ಪರಸ್ಪರ ಡಿಕ್ಕಿಯಾಗಿದ್ದು, ಶಿರಸಿ ಮೂಲದ ಮಣಿ ಎಂಬ ಯುವಕ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ಧಾನೆ. ಆತನು ಸಹ ಶಿರಸಿ ಮೂಲದ ಮಂಜುನಾಥ್ ಎನ್ನಲಾಗಿದ್ದು, ಆತನನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಬೈಕ ಸವಾರನಿಗೂ ಗಾಯಗಳಾಗಿದ್ದು, ಆತನನ್ನ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.