SHIVAMOGGA | MALENADUTODAY NEWS | ಮಲೆನಾಡು ಟುಡೆ Oct 23, 2024
ಶಿವಮೊಗ್ಗ | ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಣಕಟ್ಟೆ ಚಾನಲ್ನಲ್ಲಿ ಸುಮಾರು 70 ವರ್ಷ ವಯಸ್ಸಿನ ಅನಾಮದೇಯ ಮಹಿಳೆಯ ಶವ ಪತ್ತೆಯಾಗಿದೆ. ಶವವನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಈಕೆಯ ಹೆಸರು, ವಿಳಾಸ ಹಾಗೂ ವಾರಸ್ಸುದಾರರ ಬಗ್ಗೆ ಯಾವುದೇ ಸುಳಿವು ಇರುವುದಿಲ್ಲ.
ಈಕೆಯ ಚಹರೆ 4.10 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಶವವು ಕೊಳೆತ ಸ್ಥಿತಿಯಲ್ಲಿದೆ. ಮೈಮೇಲೆ ಹಳದಿ ಬಣ್ಣದ ಲಂಗ, ಹಸಿರು ಬಣ್ಣದ ರವಿಕೆ, ಸೊಂಟಕ್ಕೆ ಗ್ರೇ ಕಲರ್ ಬೆಲ್ಟ್ ಧರಿಸಿರುತ್ತಾರೆ. ಈ ಮಹಿಳೆಯ ವಾರಸ್ಸುದಾರರು ಪತ್ತೆಯಾದಲ್ಲಿ ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
ಶಿವಮೊಗ್ಗ | ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಬಸ್ ನಿಲ್ದಾಣದ ಹತ್ತಿರ ಸುಮಾರು 60 ವರ್ಷ ವಯಸ್ಸಿನ ಯಶೋದಮ್ಮ ಎಂಬ ಮಹಿಳೆಯು ಸುಸ್ತಾಗಿ ಮಲಗಿದ್ದರು. ಅವರನ್ನ ಸಾರ್ವಜನಿಕರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಆಕೆಯನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು.
ಆದರೆ ಅವರು ಅ.21 ರಂದು ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿರುತ್ತಾರೆ. ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಈಕೆಯ ವಿಳಾಸ ಹಾಗೂ ವಾರಸ್ಸುದಾರರ ಬಗ್ಗೆ ಯಾವುದೇ ಸುಳಿವು ಇರುವುದಿಲ್ಲ. ಈಕೆಯ ಚಹರೆ 5.1 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಬಲಭುಜದ ಮೇಲೆ ರಾಗಿಕಾಳು ಗಾತ್ರದ ಕಪ್ಪು ಮಚ್ಚೆ ಇರುತ್ತದೆ. ತಲೆಯಲ್ಲಿ 8 ಇಂಚು ಉದ್ದದ ಕಪ್ಪು ಬಿಳಿ ಕೂದಲು ಇರುತ್ತದೆ. ಈ ಮಹಿಳೆಯ ವಾರಸ್ಸುದಾರರು ಪತ್ತೆಯಾದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08182-261414 /9916882544ಗಳಿಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

——-
SUMMARY | The body of a woman was found in Kanakatte channel under Shivaji Circle police station limits in Hosamane in Bhadravathi , Shimoga,Woman dies after falling ill in Doddapet police station limits
KEYWORDS | Kanakatte channel , Shivaji Circle police station limits, Hosamane, Bhadravathi , Shimoga Doddapet police station limits,