SHIVAMOGGA | MALENADUTODAY NEWS | ಮಲೆನಾಡು ಟುಡೆ Oct 30, 2024
ಶಿವಮೊಗ್ಗ | ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಮತ್ತು ಗಂಗಾ ಕಲ್ಯಾಣ ಯೋಜನೆಗಳಡಿ ಸೌಲಭ್ಯ ಪಡೆಯಲು ಪರಿಶಿಷ್ಟ ಪಂಗಡಗಳ ಅರ್ಹ ಫಲಾಪೇಕ್ಷಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೇವಾಸಿಂಧು https://sevasindhu.karnataka.gov.in ಮುಖಾಂತರ ನ.23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂ.: 08182-276776 ನ್ನು ಸಂಪರ್ಕಿಸುವುದು.
————
ಸೈನಿಕರು ಮತ್ತು ಮಾಜಿ ಸೈನಿಕರುಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿಗಾಗಿ ಆನ್ಲೈನ್ ತರಬೇತಿ

AWPO (Army Welfare Placement Organisation) ಮತ್ತು The Maven Cohort ಎಂಬ ಸಂಸ್ಥೆಯ ಸಹಯೋಗದೊಂದಿಗೆ ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂಕ್ವರೆಗಿನ ಕೊನೆಯ ವರ್ಷದ ನಿವೃತ್ತಿಯಂಚಿನಲ್ಲಿರುವ ಸೈನಿಕರು ಹಾಗೂ ನಿವೃತ್ತ ಮಾಜಿ ಸೈನಿಕರುಗಳ ಕೇಂದ್ರ ಸರ್ಕಾರಿ ಉದ್ಯೋಗ ಮತ್ತು ಬ್ಯಾಂಕ್ ಉದ್ಯೋಗ ನೇಮಕಾತಿಗಾಗಿ ಪಾವತಿಯ ಮೇರೆಗೆ ಪೂರ್ವ ತಯಾರಿ ಆನ್ಲೈನ್ ತರಬೇತಿಗಳನ್ನು ನ.06 ರಿಂದ ಆಯೋಜಿಸುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಜಾಲತಾಣ https://me-qr.com/ZIoLV2HS ದಲ್ಲಿ ನೋಂದಾಯಿಸಿಕೊಳ್ಳುವುದರ ಮೂಲಕ ಈ ಸುವರ್ಣವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ AWPO (Army Welfare Placement Organisation) ನ ಜಾಲತಾಣ ವನ್ನು ಸಂಪರ್ಕಿಸಬಹುದಾಗಿದೆ.
ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
2024-25 ನೇ ಸಾಲಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಜಿಲ್ಲೆಯ ಆಸಕ್ತ ರೈತರಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಸಾಕಾಣಿಕೆ ಚಟುವಟಿಕೆಯಲ್ಲಿ ಸಾಧನೆ ಮಾಡಿದವರು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.
ನಿಗದಿತ ನಮೂನೆ ಅರ್ಜಿಯನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ನ.15ರೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲೆ ಎಲ್ಲಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು.
SUMMARY | shivamogga information news, shivamogga today
KEYWORDS | shivamogga information news, shivamogga today