ರೇಷನ್​ ಅಕ್ಕಿ , ಬೇಳೆ , ಗೋದಿಗೆ ಕಾಯುತ್ತಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ ! ಜೂನ್​ 28 ರೊಳಗೆ ತೆಗೆದುಕೊಳ್ಳಬೇಕು ಪಡಿತರ? ಕಾರಣವೇನು?

KARNATAKA NEWS/ ONLINE / Malenadu today/ Jun 19, 2023 SHIVAMOGGA NEWS

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಸರ್ವರ್ ನಿರ್ವಹಣಾ ಕಾರ್ಯವನ್ನು ಜೂ.28 ರಿಂದ ಕೈಗೊಳ್ಳಲಿದ್ದು, ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಜೂನ್-2023ರ ಮಾಹೆಯ ಪಡಿತರವನ್ನು ದಿ: 27/06/2023 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಜೂನ್​ 27 ಕ್ಕೆ ಲಾಸ್ಟ್ ಡೇಟ್

ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಜೂ. 27ರೊಳಗಾಗಿ ಪಡಿತರ ವಿತರಣಾ ಕಾರ್ಯವನ್ನು ಕಡ್ಡಾಯವಾಗಿ ಮುಕ್ತಾಯಗೊಳಿಸುವಂತೆ ಹಾಗೂ ಶಿವಮೊಗ್ಗ ಅನೌಪಚಾರಿಕ ಪಡಿತರ ಪ್ರದೇಶ ವ್ಯಾಪ್ತಿಯ ಎಲ್ಲಾ ಅರ್ಹ ಪಡಿತರ ಚೀಟಿದಾರರು ಜೂ.17ರೊಳಗಾಗಿ ಪಡಿತರ ಪಡೆದುಕೊಳ್ಳುವಂತೆ ಮತ್ತು ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ಕಡ್ಡಾಯವಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ನೋಂದಾಯಿಸಿಕೊಳ್ಳಲು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಪಡಿತರ ಅಕ್ಕಿ ಬಹಿರಂಗ ಹರಾಜು

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ನಗರದ ಟಿಪ್ಪುನಗರ ಎಡಭಾಗದ 2ನೇ ತಿರುವು ಚಾನಲ್ ಹತ್ತಿರ ಪಾಳುಬಿದ್ದ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಸುಮಾರು 5.90 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು.   

ಈ ಅಕ್ಕಿಯನ್ನು ಜೂನ್ 26 ರಂದು ಬೆಳಿಗ್ಗೆ 11.30 ಕ್ಕೆ ಶಿವಮೊಗ್ಗ ಅನೌಪಚಾರಿಕ ಪಡಿತರ ಪ್ರದೇಶ, ಎಪಿಎಂಸಿ ಆವರಣದ ಕೆ.ಎಫ್.ಸಿ.ಎಸ್.ಸಿ. ಸಗಟು ಮಳಿಗೆಯಲ್ಲಿ ಸಹಾಯಕ ನಿರ್ದೇಶಕರ ಸಮಕ್ಷಮ ಬಹಿರಂಗ ಹರಾಜು ಮಾಡಲಾಗುವುದು.

ಹರಾಜಿನಲ್ಲಿ ಭಾಗವಹಿಸಲು ಆಸಕ್ತರಿರುವ ಎಪಿಎಂಸಿ ಪರವಾನಗಿ ಹೊಂದಿರುವ ಬಿಡ್ಡುದಾರರು ಷರತ್ತುಗಳಿಗೆ ಒಳಪಟ್ಟು ಭದ್ರತಾ ಠೇವಣಿ ಪಾವತಿಸಿ ಗೊತ್ತುಪಡಿಸಿದ ದಿನಾಂಕದಂದು ಒಂದು ಗಂಟೆ ಮುಂಚಿತವಾಗಿ ಹಾಜರಿದ್ದು, ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜೂ.20 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ  ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಳೆಹೊನ್ನೂರು ವಿವಿ ಕೇಂದ್ರ ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಈ ಕೆಳಕಂಡ ಗ್ರಾಮಗಳಲ್ಲಿ ಜೂ. 20 ರ ಬೆಳಗ್ಗೆ 09-30 ರಿಂದ ಸಂಜೆ 04-30 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ?

 ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬೊಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮುತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜ್, ಕೃಷಿ ಕಾಲೇಜ್, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‍ಗಳು ಹಾಗೂ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಜೂ.20 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ  ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕುವೆಂಪುನಗರ, ಎನ್.ಇ.ಎಸ್. ಬಡಾವಣೆ, ಶಿವಬಸವನಗರ, ಇಂದಿರಾಗಾಂದಿ ಬಡಾವಣೆ, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜು, ಪರ್ಪೆಕ್ಟ್ ಆಲಾಯನ್ಸ್ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ಹೊನ್ನಾಳಿ ರಸ್ತೆ, ತ್ಯಾವರೆಚಟ್ನಹಳ್ಳಿ, ಯು.ಜಿ.ಡಿ., ಶೇಶಾದ್ರಿಪುರಂ, ಲಕ್ಷ್ಮೀವೆಂಕಟೇಶ್ವರ ಸಾಮಿಲ್, ತ್ರಿಮೂರ್ತಿನಗರ, ನವುಲೆ, ಅಶ್ವತ್‍ನಗರ, ಎಲ್.ಬಿ.ಎಸ್.ನಗರ, ಕೀರ್ತಿನಗರ, ಬಸವೇಶ್ವರನಗರ, ಕೃಷಿನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜೂ. 20 ರ ಬೆಳಗ್ಗೆ 09-30 ರಿಂದ ಸಂಜೆ 05-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಜೂ.20 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ  ರೈಲ್ವೆ ಕ್ರಾಸಿಂಗ್ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊನ್ನವಿಲೆ ನವುಲೆಬಸವಾಪುರ, ಶೆಟ್ಟಿಹಳ್ಳಿ, ಹೊಸಶೆಟ್ಟಿಹಳ್ಳಿ, ಅಮರಾವತಿ ಕ್ಯಾಂಪ್, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಹಾಥಿಕಟ್ಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜೂ. 20 ರ ಬೆಳಗ್ಗೆ 10-00 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಜೂ.21 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಹಾರ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ  ರೈಲ್ವೆ ಕ್ರಾಸಿಂಗ್ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ಸುತ್ತುಕೋಟೆ ಹಾಗೂ  ಸುತ್ತಮುತ್ತಲಿನ ಗ್ರಾಮಗಳಲ್ಲಿ ಜೂ. 21 ರ ಬೆಳಗ್ಗೆ 09-00 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Comment