SHIVAMOGGA | MALENADUTODAY NEWS | ಮಲೆನಾಡು ಟುಡೆ Nov 9, 2024
ಭದ್ರಾವತಿ | ಅಪ್ರಾಪ್ತ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಭದ್ರಾವತಿ ಕೋರ್ಟ್ ಆರೋಪಿಯೊಬ್ಬರಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು (ಎಫ್ಟಿಎಸ್ಸಿ-1) 4 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 51000 ದಂಡ ವಿಧಿಸಿದೆ.
ತಾಲ್ಲೂಕಿನ 43 ವರ್ಷದ ವ್ಯಕ್ತಿಯು 9 ವರ್ಷದ ಬಾಲಕಿಯ ಮೇಲೆ 2022ರಲ್ಲಿ ಲೈಂಗಿಕ ದೌರ್ಜನ್ಯ ವಸಗಿದ್ದ ಆರೋಪ ಕೇಳಿಬಂದಿತ್ತು.
ಈ ಸಂಬಂಧ ನೊಂದ ಬಾಲಕಿ ಪೋಷಕರು ನೀಡಿದ ದೂರಿನ ಮೇರೆಗೆ ಭದ್ರಾವತಿ ತಾಲ್ಲೂಕಿನ ಠಾಣೆಯೊಂದರಲ್ಲಿ ಕೇಸ್ ಆಗಿತ್ತು. ಆ ಬಳಿಕ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಕೆಯಾಗಿತ್ತು.

ಇದೀಗ ಆರೋಪಿಯ ವಿರುದ್ದ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧೀಶರಾದ ಜೆ.ಎಸ್ ಮೋಹನ್, ಅಪರಾಧಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 51 ಸಾವಿರ ದಂಡ, ದಂಡ ಕಟ್ಟಲು ವಿಫಲನಾದಲ್ಲಿ 3 ತಿಂಗಳು ಸಾದಾ ಜೈಲು ಶಿಕ್ಷೆ ವಿಧಿಸಿದ್ದಾರೆ.
SUMMARY | Bhadravathi | A Bhadravathi court has sentenced an accused to four years in jail for sexually assaulting a minor.
KEYWORDS | Bhadravathi , Bhadravathi court , sentenced four years in jail, sexually assaulting a minor