ಶಿವಮೊಗ್ಗಕ್ಕೆ ಬರುತ್ತಿದ್ದಾರೆ ಪೌರಾಡಳಿತ ಮತ್ತು ಹಜ್‌ ಸಚಿವ ರಹೀಂ ಖಾನ್‌

131

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Nov 21, 2024

ಶಿವಮೊಗ್ಗ | ನ 22 ರಂದು ಪೌರಾಡಳಿತ ಮತ್ತು ಹಜ್‌ ಸಚಿವ ರಹೀಂ ಖಾನ್‌ ರು ಶಿವಮೊಗ್ಗ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ.

22 ರಂದು ಮದ್ಯಾಹ್ನ  ಶಿವಮೊಗ್ಗಕ್ಕೆ ಆಗಮಿಸುವ ಅವರು ಶಿವಮೊಗ್ಗ ಜಿಲ್ಲಾ ಪ್ರವಾಸಿ ಮಂದಿರದಲ್ಲಿ ತಂಗಲಿದ್ದಾರೆ. ನಂತರ ಮಧ್ಯಾಹ್ನ 3.00ಕ್ಕೆ ಶಿವಮೊಗ್ಗ ಜಿಲ್ಲಾ ಇಂದಿರಾ ಕ್ಯಾಂಟೀನ್ ನಿರ್ವಹಣಾ ಘಟಕಕ್ಕೆ ಭೇಟಿ ನೀಡಲಿದ್ದಾರೆ. ನಂತರ 3.30ಕ್ಕೆ ಜಿಲ್ಲಾ ಆಡಳಿತ ಭವನದಲ್ಲಿ ನಡೆಯುವ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5.00ಕ್ಕೆ ಜಿಲ್ಲಾ ಕಾಂಗ್ರೇಸ್ ಕಚೇರಿಗೆ ಭೇಟಿ ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಕೆ. ಮುರಳಿಧರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SUMMARY|   On November 22, Rahim Khan, minister for municipal administration and Haj in the state government, undertook a tour of Shivamogga district

 

KEYWORDS|   Rahim Khan , minister for municipal administration and Haj, karnataka government, shivamoga,

Share This Article