ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ | ಪ್ರತಿದಿನದ ಕಾರ್ಯಕ್ರಮಗಳ ವಿವರ ಹೀಗಿದೆ

13

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 24, 2024 ‌ 

 

ನವೆಂಬರ್‌ 26ರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ  ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಸಂಭ್ರಮವು  ನಡೆಯುಲಿದೆ. 

ಲಕ್ಷ ದೀಪೋತ್ಸವ ಕಾರ್ಯಕ್ರಮದ ವಿವರ ಹೀಗಿದೆ. ನ.26ರಂದು 3 ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್‌ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಮಾಜಿ ವಿ.ಪ.ಸದಸ್ಯ ಹರೀಶ್ ಕುಮಾರ್ ನೇತೃತ್ವದಲ್ಲಿ ಭಕ್ತರು, ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಳ್ಳಲಿದ್ದಾರೆ. 

ನವೆಂಬರ್ 28ರಂದು ಸಂಜೆ 5.30ರಿಂದ 7 ಗಂಟೆ ವರೆಗೆ ನಾಗಸ್ವರ ವಾದನ, 7ರಿಂದ 8ರ ವರೆಗೆ ಸಾತ್ವಿಕ ಸಂಗೀತ, ಬಳಿಕ ನೃತ್ಯಾರ್ಚನೆ ಮತ್ತು ಮಾಯಾವಿಲಾಸ ನೃತ್ಯರೂಪಕ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.‌

ನವೆಂಬರ್ 29ರಂದು ಸಂಜೆ 5 ಗಂಟೆಯಿಂದ ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ನಡೆಯಲಿದೆ  ಈ ಕಾರ್ಯಕ್ರಮವನ್ನು ರಾಜ್ಯ ಗೃಹ ಸಚಿವ ಡಾ| ಜಿ.ಪರಮೇಶ್ವರ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ರಾಜರಾಜೇಶ್ವರೀ ನಗರದ ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನದ ಶ್ರೀ ಜಯೇಂದ್ರ ಪುರಿ ಮಹಾಸ್ವಾಮೀಜಿ ಅವರು ವಹಿಸುವರು.

ನವೆಂಬರ್‌ 30ರಂದು ಸಂಜೆ 5 ಗಂಟೆಯಿಂದ ಅಮೃತವರ್ಷಿಣಿ ಸಭಾಭವನದಲ್ಲಿ ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನ ನಡೆಯಲಿದೆ. ಬೆಂಗಳೂರು ಬಹುಶ್ರುತ ವಿದ್ವಾಂಸ ಶತಾವಧಾನೀ ಡಾ| ರಾ. ಗಣೇಶ ಉದ್ಘಾಟಿಸುವರು. ಲೇಖಕ, ಸಂಶೋಧಕ ಡಾ| ಪಾದೇಕಲ್ಲು ವಿಷ್ಣು ಭಟ್ಟ ಅಧ್ಯಕ್ಷತೆ ವಹಿಸುವರು. ಬಳಿಕ ಡಾ| ಪ್ರಮೀಳಾ ಮಾಧವ, ಡಾ| ಬಿ.ವಿ.ವಸಂತ ಕುಮಾರ್, ಪ್ರೊ| ಮೊರಬದ ಮಲ್ಲಿಕಾರ್ಜುನ ಅವರಿಂದ ಉಪನ್ಯಾಸ ನಡೆಯಲಿದೆ. ರಾತ್ರಿ 8.30ರಿಂದ ಶ್ರೀ ರಾಜೇಶ್ ಕೃಷ್ಣನ್ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಲಕ್ಷದೀಪೋತ್ಸವ ಪ್ರಯುಕ್ತ ಮಂಜುನಾಥ ಸ್ವಾಮಿಗೆ ನವೆಂಬರ್‌ 26ರಂದು ಹೊಸಕಟ್ಟೆ ಉತ್ಸವ, 27ರಂದು ಕೆರೆ ಕಟ್ಟೆ ಉತ್ಸವ, 28ರಂದು ಲಲಿತೋದ್ಯಾನ ಉತ್ಸವ, 29ರಂದು ಕಂಚಿಮಾರು ಕಟ್ಟೆ ಉತ್ಸವ, 30ರಂದು ಗೌರಿಮಾರು ಕಟ್ಟೆ ಉತ್ಸವ ನಡೆಯಲಿದೆ. 

ನವೆಂಬರ್ 26ರಿಂದ ಡಿ.1ರ ವರೆಗೆ ಧರ್ಮಸ್ಥಳದ ಪ್ರೌಢಶಾಲಾ ವಠಾರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯಮಟ್ಟದ ವಸ್ತುಪ್ರದರ್ಶನ ನಡೆಯಲಿದ್ದು, ಕೃಷಿ, ಆರೋಗ್ಯ, ವಾಣಿಜ್ಯ, ಶಿಕ್ಷಣ, ಗ್ರಾಮೀಣ ಗುಡಿಕೈಗಾರಿಗಳಿಗೆ ಸಂಬಂಧಿಸಿದ 300ಕ್ಕೂ ಮಿಕ್ಕಿ ಮಳಿಗೆಗಳು ಇರಲಿವೆ.

ಡಿ.1ರಂದು ಸಂಜೆ 6.30ರಿಂದ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ. ಈ ವೇಳೆ ಜಿನಗಾನೋತ್ಸವ ನಡೆಯಲಿದೆ.

 

SUMMARY |   The details of lakshdeepotsava programmes to be held in Dharmasthala in the month of Karthika have been released. Lakshdeepotsava will be held from November 26 to December 1. 

KEY WORDS  |details of lakshdeepotsava programmes,   Dharmasthala lakshdeepotsava  Karthika  Lakshdeepotsava November 26 to December 1. 

Share This Article