ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯರವರು ಇ.ಡಿ ಬಗ್ಗೆ ಗೌರವದಿಂದ ನಡೆದುಕೊಳ್ಳಬೇಕು | ಮಾಜಿ ಸಿಎಂ ಯಡಿಯೂರಪ್ಪ

ಹಂಚಿಕೊಳ್ಳಿ
WhatsApp Facebook X Telegram

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 5, 2024

ಶಿವಮೊಗ್ಗ | ಮುಡಾಹಗರಣದಲ್ಲಿ ತಮ್ಮ ವಿರುದ್ಧ ಸಾಕ್ಷಿಯನ್ನು ಇ.ಡಿ ಅಧಿಕಾರಿಗಳು ಸಂಗ್ರಹಿಸುತ್ತಿರುವುದರಿಂದ ಗಾಬರಿಗೊಂಡು ಇ.ಡಿ ಅಧಿಕಾರಿಗಳಿಗೆ ತನಿಖೆ ಮಾಡಲು ಅಧಿಕಾರ ಇಲ್ಲ ಎಂದು ಸಿ ಎಂ ಸಿದ್ದರಾಮಯ್ಯನವರು ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇ.ಡಿ ಬಗ್ಗೆ ಗೌರವದಿಂದ ನಡೆದುಕೊಳ್ಳಬೇಕು ಎಂದು ಮಾಜಿ ಸಿ ಎಂ ಯಡಿಯೂರಪ್ಪ ತಿಳಿಸಿದರು.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ  ಸಿ ಎಂ ಯಡಿಯೂರಪ್ಪನವರು ಮುಡಾಹಗರಣದಲ್ಲಿ ತಮ್ಮ ವಿರುದ್ಧ ಸಾಕ್ಷಿಯನ್ನು ಇ.ಡಿ ಅಧಿಕಾರಿಗಳು ಸಂಗ್ರಹಿಸುತ್ತಿರುವುದರಿಂದ ಗಾಬರಿಗೊಂಡು ಇ.ಡಿ ಅಧಿಕಾರಿಗಳಿಗೆ ತನಿಖೆ ಮಾಡಲು ಅಧಿಕಾರ ಇಲ್ಲ ಎಂದು ಸಿ ಎಂ ಸಿದ್ದರಾಮಯ್ಯನವರು ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯರವರು ಇ.ಡಿ ಬಗ್ಗೆ ಗೌರವದಿಂದ ನಡೆದುಕೊಳ್ಳಬೇಕು ಎಂದು ಮಾಜಿ ಸಿ ಎಂ ಯಡಿಯೂರಪ್ಪ ಹೇಳಿದರು.

ನಂತರ ಬೆಳಗಾವಿ ಅಧಿವೇಶನದ ಬಗ್ಗೆ ಮಾತನಾಡಿ ಈ ಅಧಿವೇಶನಕ್ಕೆ ನಮ್ಮೆಲ್ಲಾ ಶಾಸಕರು ಭಾಗವಹಿಸುತ್ತಾರೆ. ಸರ್ಕಾರದ ವೈಫಲ್ಯದ ಬಗ್ಗೆ ಜನತೆಗೆ ತಿಳಿಸುತ್ತಾರೆ ಎಂದರು. ಹಾಗೆಯೇ ರಾಜ್ಯಪಾಲರ ಅಧಿಕಾರವನ್ನು ಮೊಟುಕು ಗಳಿಸುವ ವಿಚಾರದ ಬಗ್ಗೆ ಮಾತನಾಡಿದ ಅವರು ಅವರ ಬಹಳಾ ಡೆಸ್ಪಿರೇಟ್‌ ಆಗಿ ಇಂತಹ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ ಎಂದರು.

 

SUMMARY|  Former CM BS Yediyurappa said Siddaramaiah should treat the ED with respect as chief minister.

KEYWORDS| cm Siddaramaiah, BS Yediyurappa, politics, 

ಹಂಚಿಕೊಳ್ಳಿ
WhatsApp Facebook X Telegram
131
ಲೇಖಕರ ಬಗ್ಗೆ

131

Malenadu Today Contributor