SHIVAMOGGA | MALENADUTODAY NEWS | ಮಲೆನಾಡು ಟುಡೆ Dec 9, 2024
ಕೇಂದ್ರ ಸರ್ಕಾರ ಹೊಸದಾಗಿ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನ ತೆರೆಯಲು ಮುಂದಾಗಿದೆ. ಅದರಲ್ಲಿಯು ವಿಶೇಷವಾಗಿ ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯವನ್ನು ಇನ್ನಷ್ಟು ವಿಸ್ತರಣೆಗೆ ನಿರ್ಧರಿಸಿದೆ.
85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು (ಕೆವಿಗಳು) ತೆರೆಯಲು ಮತ್ತು ಅಸ್ತಿತ್ವದಲ್ಲಿರುವ ಒಂದು ಕೆವಿಯನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಶಿವಮೊಗ್ಗ ಕೇಂದ್ರೀಯ ವಿದ್ಯಾಲಯದ ಎಲ್ಲಾ ತರಗತಿಗಳಲ್ಲಿ ಎರಡು ಹೆಚ್ಚುವರಿ ವಿಭಾಗಗಳನ್ನು ಸೇರಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಈ ಸಂಬಂಧ ಮಾಹಿತಿ ನೀಡಿದ ಸಂಸದ ಬಿವೈ ರಾಘವೇಂದ್ರ ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯವನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಎಲ್ಲಾ ತರಗತಿಗಳಲ್ಲಿ ಎರಡು ಹೆಚ್ಚುವರಿ ವಿಭಾಗಗಳನ್ನು ತೆರೆಯಲಾಗುತ್ತಿದೆ.
ಈ ನಿರ್ಧಾರವು ಶಿವಮೊಗ್ಗ ಕ್ಷೇತ್ರದ ಶೈಕ್ಷಣಿಕ ಬೇಡಿಕೆಗಳನ್ನು ಪೂರೈಸುವ ಮೂಲಕ ಹೆಚ್ಚಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸಹಕಾರಿಯಾಗಿದೆ ಎಂದಿದ್ದಾರೆ.
ಕೇಂದ್ರಿಯ ವಿದ್ಯಾಲಯದ ವಿಸ್ತರಣೆಯು ಜಿಲ್ಲೆಗೆ ಇನ್ನೊಂದು ಕೇಂದ್ರೀಯ ವಿದ್ಯಾಲಯ ಬಂದಷ್ಟೇ ಪ್ರಾಮುಖ್ಯತೆಯನ್ನು ಹೊಂದಿದೆ ಎಂದಿರುವ ಸಂಸದರು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಅಭಿನಂದನೆ ತಿಳಿಸಿದ್ದಾರೆ.
SUMMARY | Cabinet approves opening of 85 new Kendriya Vidyalayas (KVs) under civil/defence sector across the country and expansion of one existing KV i.e. KV Shivamogga, Karnataka by adding 2 additional sections in all the classes
KEY WORDS | Cabinet approves opening of 85 new Kendriya Vidyalayas (KVs) under civil/defence sector across the country and expansion of one existing KV i.e. KV Shivamogga, Karnataka by adding 2 additional sections in all the classes