SHIVAMOGGA | MALENADUTODAY NEWS | ಮಲೆನಾಡು ಟುಡೆ Dec 10, 2024
ಮಾಜಿ ಸಿಎಂ ಎಸ್ ಎಂ ಕೃಷ್ಣ ವಿಧಿವಶರಾಗಿದ್ದಾರೆ. ಬೆಂಗಳೂರಿನ ಸದಾಶಿವ ನಗರದ ತಮ್ಮ ನಿವಾಸದಲ್ಲಿ ಅವರು ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ನಿನ್ನೆ ತಡರಾತ್ರಿ 2.30 ರ ಸುಮಾರಿಗೆ ಸಾವನ್ನಪ್ಪಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆನಂತರ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಅಲ್ಲಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಆನಂತರ ಮನೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ನಿನ್ನೆದಿನ ಅವರು ಸಾವನ್ನಪ್ಪಿದ್ದಾರೆ.
ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರಾಧ ಎಸ್‌ಎಂಕೃಷ್ಣ 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾಗಿ ಕೆಲಸ ನಿರ್ವಹಿಸಿದ್ದ ಎಸ್‌ಎಂಕೆ ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
SUMMARY | Former Chief Minister of the state SM Krishna passed away
KEY WORDS | Former Chief Minister , SM Krishna passed away.