SHIVAMOGGA | MALENADUTODAY NEWS | ಮಲೆನಾಡು ಟುಡೆ Dec 11, 2024
ಶಿವಮೊಗ್ಗವೂ ಸೇರಿದಂತೆ ರಾಜ್ಯದ ವಿವಿದೆಡೆ ಈ ವಾರ ಮತ್ತೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಬೆಂಗಳೂರು ತನ್ನ ದೈನಂದಿನ ಬುಲೆಟಿನ್‌ನಲ್ಲಿ ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತದಿಂದಾಗಿ ನಾಳೆಯಿಂದ ಭಾನುವಾರದವರೆಗೂ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಈ ನಡುವೆ ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಇಲಾಖೆಯು ಶನಿವಾರ ಯೆಲ್ಲೊ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆ ಮಾಹಿತಿ
11 ಡಿಸೆಂಬರ್ 2024 : ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
12 ಡಿಸೆಂಬರ್ 2024: ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು, ರಾಮನಗರ, ಚಿತ್ರದುರ್ಗ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಕೊಪ್ಪಳ, ಗದಗ, ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿ
13 ಡಿಸೆಂಬರ್ 2024 : ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶನಿವಾರವೂ ರಾಜ್ಯದ ವಿವಿಧೆಡೆ ಮಳೆ ಮುಂದುವರಿಯುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
SUMMARY | Heavy to very heavy rainfall is likely to occur in Dakshina Kannada, Udupi, Kodagu, Shivamogga, Chikkamagaluru, Uttara Kannada, Ballari, Bengaluru Rural, Bengaluru Urban, Chamarajanagar, Chikkaballapura, Chitradurga, Davangere, Hassan, Kolar, Mandya, Mysuru, Ramanagara, Tumakuru and Vijayanagar districts.
KEY WORDS | Heavy to very heavy rainfall is likely to occur , Dakshina Kannada, Udupi, Kodagu, Shivamogga, Chikkamagaluru, Uttara Kannada, Ballari, Bengaluru Rural, Bengaluru Urban, Chamarajanagar, Chikkaballapura, Chitradurga, Davangere, Hassan, Kolar, Mandya, Mysuru, Ramanagara, Tumakuru , Vijayanagar districts.