SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 16, 2024
ಖ್ಯಾತ ತಬಲಾ ವಾದಕ ಹಾಗು ಪದ್ಮಭೂಷಣ ಪ್ರಶಸ್ತಿ ವಿಜೇತರಾಗಿದ್ದ ಉಸ್ತಾದ್ ಜಾಕೀರ್ ಹುಸೇನ್ ಅನಾರೋಗ್ಯದಿಂದ ನಿನ್ನೆ ನಿಧನರಾಗಿದ್ದಾರೆ.
ಜಾಕೀರ್ ಹುಸೇನ್‌ರವರಿಗೆ 73 ವರ್ಷ ವಯಸ್ಸಾಗಿತ್ತು. ಅವರು ಉಸಿರಾಟ ಹಾಗು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅವರನ್ನು ಇತ್ತಿಚಿಗಷ್ಟೇ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಹಲವು ಪ್ರಶಸ್ತಿಗಳ ಸರದಾರ
ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಉಸ್ತಾದ್ ಜಾಕೀರ್ ಹುಸೇನ್ ಕೂಡಾ ಒಬ್ಬರು. ಸಂಗೀತದ ಮೂಲಕ ಅವರ ಅನೇಕ ಶ್ರೇಷ್ಠ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದರು. ಹುಸೇನ್ ಅವರಿಗೆ 1988 ರಲ್ಲಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಶ್ರೀ, 2002 ರಲ್ಲಿ ಪದ್ಮಭೂಷಣ ಮತ್ತು 2023 ರಲ್ಲಿ ಪದ್ಮವಿಭೂಷಣ ಪುರಸ್ಕಾರಗಳು ಲಭಿಸಿದ್ದವು.
SUMMARY | Noted tabla player and Padma Bhushan awardee Ustad Zakir Hussain passed away yesterday after a prolonged illness.
KEYWORDS | tabla player, Ustad Zakir Hussain, passed away,