SHIVAMOGGA | MALENADUTODAY NEWS | ಮಲೆನಾಡು ಟುಡೆ Dec 24, 2024
ಇ-ಖಾತೆ ಮಾಡಿಕೊಡಲು 5000 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆಯಲ್ಲಿಯೇ PDO ಒಬ್ಬರು ಲೋಕಾಯುಕ್ತರಿಂದ ಟ್ರ್ಯಾಪ್ ಆಗಿದ್ದಾರೆ. ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾಮಪಂಚಾಯಿತಿಯ ಪ್ರಭಾರ ಪಿಡಿಓ ಈಶ್ವರಪ್ಪ ಟ್ರ‍್ಯಾಪ್ ಆದವರು. ಸದ್ಯ ಸರ್ಕಾರಿ ನೌಕರನನ್ನು ತನಿಖೆ ಸಂಬಂಧ ವಶಕ್ಕೆ ಪಡೆದು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್ ರವರು ಪ್ರಕರಣದ ತನಿಖೆಯನ್ನು ಕೈಗೊಂಡಿರುತ್ತಾರೆ.
ಏನಿದು ಕೇಸ್
ಮಹಮ್ಮದ್ ಗೌಸ್ ರವರ ತಂದೆ ಭಾಷಾ ಸಾಬ್ ಎಂಬವರು ಇಂಡುವಳ್ಳಿ ಗ್ರಾಮದಲ್ಲಿ ಜಮೀನನ್ನು ಹೊಂದಿದ್ದರು, ಅದರಲ್ಲಿ ಒಂದು ಮನೆಯನ್ನು ಕಟ್ಟಿಕೊಂಡಿದ್ದರು. ಆ ಮನೆಯ ಮೇಲೆ ಲೋನ್ ತೆಗೆದುಕೊಳ್ಳುವ ಸಂಬಂಧ, ಮನೆ ಇರುವ ಜಾಗವನ್ನು ತನ್ನ ತಾಯಿ ಮಮ್ರಾಜ್ ರವರ ಹೆಸರಿನಲ್ಲಿ ಈ-ಖಾತಾ ಮಾಡಿಕೊಡುವಂತೆ ಇಂಡುವಳ್ಳಿ ಗ್ರಾಮ ಪಂಚಾಯ್ತಿಗೆ ಅರ್ಜಿಯನ್ನು ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಇಂಡುವಳ್ಳಿ ಗ್ರಾಮದ ಪ್ರಭಾರ ಪಿಡಿಓ ರವರಾದ ಈಶ್ವರಪ್ಪ ರವರು ಮನೆ ಜಾಗಕ್ಕೆ ಬಂದು, ಅಳತೆ ಮಾಡಿಕೊಂಡು ಹೋಗಿದ್ದರು.
ಆದರೆ ದಾಖಲಾತಿ ಸಂಬಂಧ ಈ-ಖಾತಾ ಮಾಡಿ ಕೊಡುವಂತೆ ಹಲವಾರು ಬಾರಿ ಈಶ್ವರಪ್ಪರವರ ಹತ್ತಿರ ಕೇಳಿದಾಗಲೂ ಸಹ ಅವರು ಮಾಡಿಕೊಟ್ಟಿರಲಿಲ್ಲ. ಅಲ್ಲದೆ ಅಲ್ಲದೆ ಕಳೆದ ಡಿಸೆಂಬರ್ 20 ರಂದು ಈಶ್ವರಪ್ಪರವರು ಈ ಸ್ವತ್ತು ಮಾಡಿಕೊಡಲು 5000 ರೂಪಾಯಿ ಕೊಡುವಂತೆ ಬೇಡಿಕೆ ಇಟ್ಟಿದ್ದರು.
ಈ ನಿಟ್ಟಿನಲ್ಲಿ ಮೊಹಮದ್ ಗೌಸ್ ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದರು. ದೂರು ದಾಖಲಿಸಕೊಂಡ ಲೋಕಾಯುಕ್ತ ಪೊಲೀಸರು ಇವತ್ತು ಬೆಳಗ್ಗೆ ಈಶ್ವರಪ್ಪ ಲಂಚದ ಹಣ ಪಡೆಯುವಾಗ ಅವರನ್ನ ಟ್ರ್ಯಾಪ್ ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಮಂಜುನಾಥ ಚೌದರಿ. ಎಂ.ಹೆಚ್. ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ, ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್‌ಗಳಾದ ಹೆಚ್.ಎಸ್ ಸುರೇಶ್, ಸಿಬ್ಬಂದಿಯವರಾದ ಯೋಗೇಶ್ ಸಿ.ಹೆಚ್.ಸಿ, ಮಂಜುನಾಥ ಎಂ. ಸಿ.ಹೆಚ್.ಸಿ, ಸುರೇಂದ್ರ ಸಿ.ಹೆಚ್.ಸಿ, ಪ್ರಶಾಂತ್ ಕುಮಾರ್,ಹೆಚ್. ಸಿ.ಪಿ.ಸಿ. ಚೆನ್ನೇಶ್, ಸಿ.ಪಿ.ಸಿ ದೇವರಾಜ್, ಸಿ.ಪಿ.ಸಿ, ಅರುಣ್ ಕುಮಾರ್ ಯು.ಬಿ ಸಿ.ಪಿ.ಸಿ. ಅಂಜಲಿ, ಮ.ಪಿ.ಸಿ ಜಯಂತ್ ಎ.ಪಿ.ಸಿ ಮತ್ತು ಪ್ರದೀಪ್ ಎ.ಪಿ.ಸಿ. ರವರು ಪಾಲ್ಗೊಂಡಿದ್ದರು ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
SUMMARY | PDO in charge of Induvalli Gram Panchayat, Sorab Taluk, Shivamogga District, has fallen into the Lokayukta trap. Shivamogga Lokayukta attack
KEY WORDS | PDO in Lokayukta trap , Induvalli Gram Panchayat, Soraba Taluk, Shivamogga District, . Shivamogga Lokayukta attack