ಡಿ. 29 ರಂದು ಕುಪ್ಪಳಿಯಲ್ಲಿ ವಿಶ್ವಮಾನವ ದಿನಾಚರಣೆ

ಹಂಚಿಕೊಳ್ಳಿ
WhatsApp Facebook X Telegram

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 24, 2024

ಶಿವಮೊಗ್ಗ | ಡಿ. 29 ರಂದು  ಕುವೆಂಪು ಅವರ 120 ನೇ ಜನ್ಮ ದಿನೋತ್ಸವ ಅಂಗವಾಗಿ ಬೆಳಿಗ್ಗೆ10 ಗಂಟೆಗೆ ಕವಿ ಶೈಲದಲ್ಲಿ ಕವಿ ನಮನ ಹಾಗೂ ಬೆಳಗ್ಗೆ 11 ಗಂಟೆಗೆ ಕುಪ್ಪಳಿಯ ಹೇಮಾಂಗಣದಲ್ಲಿ ವಿಶ್ವ ಮಾನವ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಶಿವಮೊಗ್ಗ ರಾಷ್ಟ್ರಕವಿ ಕುವೆಂಪು ಪ್ರತಿಷ್ಟಾನ ಕುಪ್ಪಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕದ ಉಪಮಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್‌ ನೆರವೇರಿಸಲಿದ್ದಾರೆ.  ಆ ಸಂದರ್ಭದಲ್ಲಿ ಶ್ರೀ ರಾಮಾಯಣ ದರ್ಶನಂ ಕೃತಿಯನ್ನು ಸಹ ಅವರು ಬಿಡುಗಡೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ತಂಗಡಗಿ ಶಿವರಾಜ್‌ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ.

ಆ ದಿನ ಸಂಜೆ 6 ಗಂಟೆಗೆ ತೀರ್ಥಹಳ್ಳಿಯ ಗೋಪಾಲಗೌಡ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಕುವೆಂಪುರವರ ನಾಟಕ ಪ್ರದರ್ಶನ ಜರುಗಲಿದೆ.

SUMMARY |  D. As part of the 120th birth anniversary celebrations of Kuvempu, kavi namaskar will be held at Kavi Shaila at 10 am and World Human Day will be celebrated at Hemangana in Kuppali at 11 am.


KEYWORDS | birth anniversary,  Kuvempu, thirthahalli,

ಹಂಚಿಕೊಳ್ಳಿ
WhatsApp Facebook X Telegram
131
ಲೇಖಕರ ಬಗ್ಗೆ

131

Malenadu Today Contributor