SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 30, 2024
ಹೊಸ ವರ್ಷಾಚರಣೆಗೆ ಇನ್ನೇನು 2 ದಿನಗಳು ಮಾತ್ರ ಬಾಕಿ ಇದ್ದು ಈ ನಡುವೆ ರಾಜ್ಯ ಪೊಲೀಸ್ ಇಲಾಖೆ ಮೊಬೈಲ್ ಬಳಕೆದಾರರಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಅದೇನೆಂದರೆ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಸೈಬರ್ ಕ್ರಿಮಿನಲ್‌ಗಳು ನಿಮ್ಮ ಮೊಬೈಲ್ ಗೆ ಹಾನಿಕಾರಕ ಲಿಂಕ್‌ಗಳನ್ನು ಕಳುಹಿಸಿ ಹ್ಯಾಕ್ ಮಾಡುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಅಂತಹ ಲಿಂಕ್‌ಗಳು ಬಂದರೆ ಅದನ್ನು ನಿರ್ಲಕ್ಷಿಸಿ ಡಿಲೀಟ್ ಮಾಡಿ ಯಾವುದೇ ಸೈಬರ್ ಕ್ರೈಂ ಅಪರಾಧಕ್ಕೆ ಒಳಗಾದಲ್ಲಿ ಕೂಡಲೇ 1930 ಕ್ಕೆ ಕರೆ ಮಾಡಿ ಎಂದಿದ್ದಾರೆ.
ಪ್ರಕಟಣೆಯಲ್ಲಿ ಏನಿದೆ


2025ನೇ ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಸೈಬರ್ ಕ್ರಿಮಿನಲ್‌ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್ ಮತು APK ಫೈಲ್ಗಳನ್ನು ಕಳುಹಿಸಿ ಸಾರ್ವಜನಿಕರ ಮೊಬೈಲ್‌ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ನಂತರ ಹ್ಯಾಕ್ ಮಾಡಿದ ಮೊಬೈಲಿನಿಂದ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್ ಮತ್ತು APK ಫೈಲ್‌ಗಳನ್ನು ದೊಡ್ಡಮಟ್ಟದಲ್ಲಿ ಶೇರ್ ಮಾಡುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ಈ ರೀತಿಯ ಹೊಸ ವರ್ಷದ ಶುಭಾಶಯ ಕೋರುವ ಯಾವುದೇ ಹಾನಿಕಾರಕ ಲಿಂಕ್‌ಗಳು ಮತ್ತು APK ಫೈಲ್‌ಗಳನ್ನು ವಾಟ್ಸಾಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಿಂದ ಸ್ವೀಕರಿಸಿಕೊಂಡಲ್ಲಿ ಅದನ್ನು ತಕ್ಷಣ ಡಿಲೀಟ್ ಮಾಡಿರಿ. ಯಾವುದೇ ಕಾರಣಕ್ಕೂ ಸದ್ರಿ ಹಾನಿಕರ ಲಿಂಕ್ ಮತ್ತು APK ಫೈಲ್ ಗಳನ್ನು ಯಾರಿಗೂ ಶೇರ್ ಮಾಡದಿರಿ.
ಹಾನಿಕಾರಕ ಲಿಂಕ್ ಮತ್ತು APK ಫೈಲ್‌ಗಳನ್ನು ಯಾವುದಾದರೂ ವಾಟ್ಸಾಪ್ ಗ್ರೂಪ್ ಗಳಿಗೆ ನಿಮ್ಮ ಪರಿಚಿತ ವಾಟ್ಸಾಪ್ ಸಂಖ್ಯೆಯಿಂದಲೇ ಪೋಸ್ಟ್ ಮಾಡಿದಲ್ಲಿ ಸದ್ರಿ ಗ್ರೂಪಿನ ಅಡ್ಮಿನ್ ಗಳು ಅಂತಹ ಲಿಂಕ್ ಮತ್ತು APK ಫೈಲ್ ಗಳನ್ನು ಪರಿಶೀಲನೆ ಮಾಡಿ ಡಿಲೀಟ್ ಮಾಡುವಂತೆ ಈ ಮೂಲಕ ಸೂಚಿಸಲಾಗಿದೆ. ಅಷ್ಟೇ ಅಲ್ಲದೆ ಇದಕ್ಕಾಗಿ ಪೊಲೀಸ್ ಇಲಾಖೆ ವೆಬ್ಸೈಟ್ ಒಂದನ್ನು ತರೆದಿದ್ದು, ಅಪರಾದಕ್ಕೆ ಒಳಗಾದವರು ಆ ಲಿಂಕ್‌ನಲ್ಲಿ ದೂರು ದಾಖಲಿಸಬಹುದು
SUMMARY | That is, there are chances that cyber criminals can hack your mobile by sending harmful links on New Year’s Eve. So if such links come up, ignore them and delete them
KEYWORDS | harmful links, cyber criminals, police,