SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 2, 2025
ಭಾವಸಾರ ವಿಜನ್ ಇಂಡಿಯಾ ಸಂಸ್ಥೆ ವತಿಯಿಂದ ನಗರದ ಹಕ್ಕಿಪಿಕ್ಕಿ ಕ್ಯಾಂಪ್ ನಿವಾಸಿಗಳಿಗೆ, ಚಳಿಗಾಲದ ಹಿನ್ನೆಲೆಯಲ್ಲಿ ಹೊದಿಕೆ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮಕ್ಕೆ ಮೆಟ್ರೋ ಆಸ್ಪತ್ರೆಯ ವೈದ್ಯರಾದ ಡಾ. ಶಂಕರ್ ನವಲೆ ಚಾಲನೆ ನೀಡಿದರು ನಂತರ ಮಾತನಾಡಿದ ಅವರು ಭಾವಸಾರ ವಿಜನ್ ಇಂಡಿಯಾ ಸಂಸ್ಥೆಯೂ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಈ ವರ್ಷದ ನೂತನ ಸಮಿತಿಯ ಮೊದಲ ಕಾರ್ಯಕ್ರಮ ಹೃದಯಸ್ಪರ್ಶಿಯಾಗಿದೆ ಎಂದರು.
ಚಳಿಗಾಲದಲ್ಲಿ ದೇಹಕ್ಕೆ ವಿವಿಧ ರೀತಿಯ ತೊಂದರೆಗಳಾಗುತ್ತವೆ. ಆದ್ದರಿಂದ ಮುಂಜಾಗ್ರತೆ ತೆಗೆದುಕೊಳ್ಳುವುದು ಅಗತ್ಯವಾಗಿದೆ. ಶೀತ, ನೆಗಡಿ, ಜ್ವರ, ಅಜೀರ್ಣ, ಅಲರ್ಜಿಯಂತ ಸಮಸ್ಯೆಗಳು ಕಂಡುಬರುತ್ತದೆ. ಚಳಿಯ ತೀವ್ರತೆಯಿಂದ ರಕ್ತ ಸಂಚಾರದಲ್ಲಿ ತೊಂದರೆಯಾಗುವ ಸಂದರ್ಭವಿರುವುದು ಪಾರ್ಶ್ವವಾಯು, ಅಧಿಕ ಮಧುಮೇಹ, ಕಡಿಮೆ ರಕ್ತದೊತ್ತಡ, ಹೃದಯಾಘಾತಗಳಾಗುವ ಸಂಭವ ಹೆಚ್ಚಾಗಿರುತ್ತದೆ. ಸ್ವಚ್ಚತೆ ಕಾಪಾಡುವುದು, ಜಂಕ್ಫುಡ್ಗಳ ಸೇವನೆ ಮಾಡಬೇಡಿ. ಯೋಗ, ಧ್ಯಾನ, ವ್ಯಾಯಾಮ, ನಡಿಗೆಯಂತಹ ದೈಹಿಕ ಚಟುವಟಿಕೆಗಳು ಮಾಡಬೇಕು. ವಿಟಮಿನ್-ಡಿ ಹೊಂದಿರುವ ಸೂರ್ಯನ ಬೆಳೆಕು ಪಡೆಯಬೇಕು.
ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿರ್ವಹಿಸಬಹುದಾಗಿದೆ. ಮಧುಮೇಹ ಹೊಂದಿರುವವರು ತಪ್ಪದೇ ಔಷಧಿಗಳನ್ನು ತೆಗೆದುಕೊಳ್ಳಬೇಕು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಿ. ನಿಯಮಿತವಾಗಿ ನೀರು ಕುಡಿಯಿರಿ. ಚಳಿಯಲ್ಲಿ ಸುತ್ತಾಟ ಮಾಡುವುದು ಬೇಡ ಎಂದು ಅನೇಕ ಸಲಹೆಗಳನ್ನು ನೀಡಿದರು. ಮುಂದಿನ ದಿನಗಳಲ್ಲಿ ಬಿವಿಐ ಸಂಸ್ಥೆಯೂ ಮತ್ತಷ್ಟು ಸಮಾಜಮುಖಿ ಕಾರ್ಯಗಳು, ಉದಾತ್ತ ಸೇವೆಗಳ ಮೂಲಕ ಬಡವರ, ಶ್ರಮಿಕರ ಸಹಾಯ ಮಾಡಲಿ ಆಶಿಸಿದರು.
SUMMARY | Bhavasara Vision India had organised a blanket distribution programme for the residents of Hakkipikki camp in the city ahead of winter
KEYWORDS | Bhavasara Vision India, blanket, programme, metro hospital,