SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 2, 2025
ಶಿವಮೊಗ್ಗ | ಸಂಯುಕ್ತ ಕಿಸಾನ್ ಮೋರ್ಚಾ ಶಂಭು ಗಡಿಯಲ್ಲಿ ನಡೆಸುತ್ತಿರುವ ಚಳುವಳಿಯ ಒತ್ತಾಯಗಳ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ಚರ್ಚೆ ಮಾಡಿ ಪರಿಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಹಸಿರು ಸೇನೆ ರಾಜ್ಯಧ್ಯಕ್ಷರಾದ ಹೆಚ್ ಆರ್ ಬಸವರಾಜಪ್ಪ ಮಾತನಾಡಿ ಈ ಹಿಂದೆ ಕೇಂದ್ರ ಸರ್ಕಾರ ರೈತರ ಚಳುವಳಿಗೆ ಮಣಿದು ರೈತ ವಿರೋಧಿ 3ಕೃಷಿ ಕಾಯ್ದೆಗಳನ್ನು ವಾಪಾಸ್ಸು ಪಡೆಯಿತು. ಮತ್ತು ಆ ಸಂದರ್ಭದಲ್ಲಿ ಎಂ.ಎಸ್.ಪಿ ಕಾನೂನು ಬದ್ಧವಾಗಿ ಜಾರಿ ಮಾಡುವುದಾಗಿ, ವಿದ್ಯುತ್ ಶಕ್ತಿ ಖಾಸಗೀಕರಣ ಮಾಡುವುದಿಲ್ಲವೆಂದು ಲಿಖಿತ ಭರವಸೆ ಕೊಟ್ಟಿತ್ತು. ಲಿಖಿತ ಭರವಸೆ ಕೊಟ್ಟು 2ವರ್ಷಗಳು ಕಳೆದರೂ ಎಂ.ಎಸ್.ಪಿ ಜಾರಿ ಮಾಡದ ಕಾರಣ, ಪುನಃ ಹರಿಯಾಣದ ಶಂಭು ಗಡಿಯಲ್ಲಿ 8 ತಿಂಗಳುಗಳಿಂದ ರೈತರು ಚಳುವಳಿ ನಡೆಸುತ್ತಿದ್ದಾರೆ. ರೈತ ನಾಯಕ ಜಗತ್‌ಸಿಂಗ್ ದಲ್ಲಿವಾಲರವರು 38 ದಿನಗಳಿಂದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು, ಇವರ ಆರೋಗ್ಯ ಸಂಪೂರ್ಣ ಹದಗೆಟ್ಟಿದೆ. ದೇಶದ ಕೃಷಿ ಕ್ಷೇತ್ರದ ಅಭಿವೃದ್ಧಿಗೊಸ್ಕರ ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ. ಸುಪ್ರೀಂಕೋರ್ಟ್ ಸಹ ಕೇಂದ್ರ ಸರ್ಕಾರ ಮತ್ತು ಪಂಜಾಬ್ ಸರ್ಕಾರ ಇವರ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿ ನ್ಯಾಯವಾಗಿ ಪರಿಹಾರ ಕೊಟ್ಟು ಅಮೂಲ್ಯವಾದಂತಹ ಅವರ ಜೀವ ಉಳಿಸಬೇಕೆಂದು ಎರಡು ಸರ್ಕಾರಗಳಿಗೆ ಸೂಚನೆ ಕೊಟ್ಟಿದೆ. ಆದಾಗ್ಯೂ ಈ ಚಳುವಳಿ ಪಂಜಾಬ್ ಮತ್ತು ಹರಿಯಾಣ ರೈತರಿಗೆ ಮಾತ್ರ ಸೀಮಿತವಾಗಿಲ್ಲ. ಭಾರತ ದೇಶದ ರೈತರ ಪರವಾಗಿ ಚಳುವಳಿ ನಡೆಯುತ್ತಿದೆ. ಜಗತ್ಸಿಂಗ್ ದಲೈವಾಲರವರು ಸಹ ಈ ದೇಶದ ರೈತರ ಪರವಾಗಿ ಗಾಂಧಿಜೀಯವರು ಹಾಕಿಕೊಟ್ಟಂತಹ ಮಾರ್ಗದಲ್ಲಿ ಅಹಿಂಸಾತ್ಮಕವಾಗಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ಮಾತುಕತೆ ಮೂಲಕ ಮೇಲ್ಕಂಡ ಸಮಸ್ಯೆಯನ್ನು ಪರಿಹರಿಸಿ ರೈತ ಮುಖಂಡನ ಪ್ರಾಣ ಉಳಿಸುವ ಕೆಲಸ ಮಾಡಬೇಕೆಂದು ಈ ಮೂಲಕ ಒತ್ತಾಯಿಸುತ್ತಿದ್ದೇವೆ. ಇಲ್ಲವಾದಲ್ಲಿ ದೇಶಾದ್ಯಂತ ಚಳುವಳಿಯನ್ನು ತೀವ್ರಗೊಳಿಸಲಾಗುವುದು ಎಂದರು.
SUMMARY | The Karnataka Rajya Raitha Sangha and The Green Sena staged a protest in front of the deputy commissioner’s office in the city, demanding that the central government immediately discuss and resolve the issue
KEYWORDS | Karnataka Rajya Raitha Sangha, deputy commissioner’s office, protest,