SHIVAMOGGA | MALENADUTODAY NEWS | ಮಲೆನಾಡು ಟುಡೆ Jan 17, 2025
ಪ್ರಚೋದನಾಕಾರಿ ಭಾಷಣದ ಸಂಬಂಧ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಬಿಜೆಪಿ ಮುಖಂಡ ಅರುಣ್ ಕುಗ್ವೆ ವಿರುದ್ಧ ಕೇಸ್ ದಾಖಲಾಗಿದೆ.
ಗೋವಿನ ಕೆಚ್ಚಲು ಕಡಿದ ಪ್ರಕರಣದ ಸಂಬಂಧ ಪ್ರತಿಭಟನೆ ನಡೆಸ್ತಿದ್ದ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಅರುಣ್ ಕುಗ್ವೆ ಒಂದು ಸಮುದಾಯದ ಗುರಿಯಾಗಿಸಿಕೊಂಡು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಜೀಂ ಎಂಬುವವರು ದೂರು ನೀಡಿದ್ದರು. ಈ ಸಂಬಂಧ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಅರುಣ್ ಕುಗೈ ಅವರು ಮಾಡಿದ ಭಾಷಣದಿಂದ ಸಮಾಜದಲ್ಲಿ ಅಶಾಂತಿ ನಿಂತಿ ಸೃಷ್ಟಿಸುವ ಜೊತೆಗೆ ಎರಡು ಸಮುದಾಯಗಳ ನಡುವೆ ದ್ವೇಷಾಸೂಯೆ ಉಂಟಾಗಲು ಕಾರಣವಾಗುತ್ತದೆ. ಕೋಮುಗಲಭೆಗೆ ಪ್ರಚೋದನೆ ನೀಡುವ ರೀತಿಯಲ್ಲಿ ಭಾಷಣ ಮಾಡಿರುವ ಅರುಣ್ ಕುಗ್ವೆ ವಿರುದ್ದ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.
SUMMARY | Shimoga District Sagar Taluk Sagar Town Police Station Provocative Speech Case Against Arun Kugwe
KEY WORDS | Shimoga District, Sagar Taluk, Sagar Town Police Station, Provocative Speech Case, Case Against Arun Kugwe