SHIVAMOGGA | MALENADUTODAY NEWS | ಮಲೆನಾಡು ಟುಡೆ | Jan 20, 2025
ಕರ್ನಾಟಕ ಸಂಗೀತ ನೃತ್ಯ ಆಕಾಡೆಮಿ ಬೆಂಗಳೂರು ಇವರ ವತಿಯಿಂದ ಜನವರಿ 22 ರಂದು ಸಂಗೀತ ನೃತ್ಯೋತ್ಸವ ಕಾರ್ಯಕ್ರಮವನ್ನು ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ನಡೆಸಲಾಗುತ್ತಿದೆ. ಈ ಕುರಿತು ಕರ್ನಾಟಕ ಸಂಗೀತ ನೃತ್ಯ ಆಕಾಡೆಮಿ ಬೆಂಗಳೂರಿನ ಸದಸ್ಯ ಸಂಚಾಲಕಿ ಆದ ಡಾ. ಗೀತಾರವರು ಮಾಹಿಸಿ ನೀಡಿದರು.
ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಬೆಳಿಗ್ಗೆ 10:30ರ ಹೊತ್ತಿಗೆ ಪ್ರಾರಂಭವಾಗುವ ಈ ಕಾರ್ಯಕ್ರಮವನ್ನು ಶಿಕ್ಷಣ ಸಚಿವರಾದ ಎಸ್ ಮಧು ಬಂಗಾರಪ್ಪನವರು ಉದ್ಘಾಟಿಸಲಿದ್ದಾರೆ. ಹಾಗೆಯೇ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್ ಎನ್ ಚೆನ್ನಬಸಪ್ಪ ವಹಿಸಲಿದ್ದಾರೆ ಎಂದರು.
ನಾವು ಈಗಿನ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಂಸ್ಕ್ರತಿಯನ್ನು ತಿಳಿಸುವ ದೃಷ್ಠಿಯಿಂದ ಈ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ,ಈ ಕಾರ್ಯಕ್ರಮದಲ್ಲಿ ಭರತನಾಟ್ಯ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಸುಗಮ ಸಂಗೀತ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದರು.
SUMMARY | Karnataka Sangeetha Nritya Academy, Bengaluru, is organising a music dance festival on January 22 at Kuvempu Rangamandira in Shivamogga.
KEYWORDS | Bengaluru, Karnataka Sangeetha Nritya Academy, music dance festival,
