ವಿದ್ಯಾ‌ರ್ಥಿಗಳಿಗೆ ಲ್ಯಾಪ್‌ ಟಾಪ್‌ ಕೊಡ್ತಿದ್ದಾರಾ? ಸಮಾಜ ಕಲ್ಯಾಣ ಇಲಾಖೆಯ ಮಹತ್ವದ ಪ್ರಕಟಣೆ |

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 23, 2025 ‌‌ 

‌ಅನಾಮದೇಯ ಸುಳ್ಳು ಕರೆಗಳಿಗೆ ಕಿವಿಗೊಡಬೇಡಿ ಎಂದು ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕರು ಪ್ರಕಟಣೆಯೊಂದನ್ನು ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡಲಾಗುತ್ತಿದೆ ಎಂಬ ಕರೆಗಳು ಇಲಾಖೆಯ ವ್ಯಾಪ್ತಿಗೆ ಬರುವ ವಿದ್ಯಾರ್ಥಿಗಳಿಗೆ ಬರುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆ ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕರು ವಿದ್ಯಾರ್ಥಿಗಳಿಗೆ ಜಾಗ್ರತೆ ವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ. 

ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ

ಶಿವಮೊಗ್ಗ ತಾಲೂಕಿನ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾ/ವರ್ಗದ ವಿದ್ಯಾರ್ಥಿಗಳಿಗೆ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯ, ವಿದ್ಯಾನಗರ, ಶಿವಮೊಗ್ಗ ತಾಲೂಕು ಇವರ ಕಚೇರಿಯಿಂದ ಲ್ಯಾಪ್‌ಟಾಪ್ ನೀಡಲಾಗುತ್ತಿದೆ ಎಂಬ ಅನಾಮದೇಯ ಹಾಗೂ ಮಧ್ಯವರ್ತಿಗಳಿಂದ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಸುಳ್ಳು ಕರೆಗಳು ಬರುತ್ತಿದ್ದು, ಈ ಸುಳ್ಳು ಸುದ್ಧಿಗೆ ಸಾರ್ವಜನಿಕರು/ವಿದ್ಯಾರ್ಥಿಗಳು ಕಿವಿಗೊಡಬಾರದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SUMMARY |  Don’t listen to fake calls from anonymous, director of the social welfare department has issued an announcement.

KEY WORDS | Dont listen to fake calls from anonymous, director of social welfare department , social welfare department announcement

Leave a Comment